ಜೋ ಜೋ ರಂಗಯ್ಯ ಜೋ ಜೋ ಕೃಷ್ಣಯ್ಯ
ಮಲಗಯ್ಯ ಜೋ ಜೋ ಪ
ಕಣ್ಣೇಕೆ ನೀನು ಮುಚ್ಚಲೊಲ್ಲೆಯೊ ರಂಗ
ಬೆನ್ನು ಭಾರವಾಗಿರುವುದೇನೋ ದೇವ
ಮಣ್ಣಿನೊಳು ನೀನಾಡಿ ಮೈ ನೋಯುವುದೇನೊ
ಹೊನ್ನು ಕಶಿಪುವಿನ ಕರುಳ ಕಂಡಂಜಿದೆಯೇನೊ 1
ಚಿಣ್ಣ ನೀ ಧರೆಯನಳೆಯಲೇತಕೆ ಪೋದೆ
ಗಣ್ಡುಗೊಡಲಿ ಪಿಡಿದು ಕೈಯಿ ಉಳುಕಿಹುದೇನೊ
ಅನ್ನವ ಬಿಟ್ಟು ನೀ ಪರ್ನವೇತಕೆ ತಿಂದೆ
ಬೆಣ್ಣೆಯ ಮೆದ್ದು ನಿನ ಹೊಟ್ಟೆ ನೊಯ್ಯುವದೇನೊ 2
ಬತ್ತಲೆ ತಿರುಗಿ ಮೈ ಬಿಸಿಯಾಗಿರುವದೇನೊ
ಕತ್ತಿಯ ಪಿಡಿದು ತೇಜಿಯ ಹತ್ತಬೇಕೇನೊ
ಹೊತ್ತಾಯ್ತು ಕಂದಯ್ಯ ಮಲಗೆಂದು ಯಶೋದೆ
ಮುತ್ತಿಟ್ಟು ತೂಗಿದಳು ರಂಗೇಶವಿಠಲನ 3