ಕಂಡಿರೇನೇ ರಂಗನಾ ನಿಮ್ಮ ಮನೆಗಳಲ್ಲಿ
ಕಂಡರೆ ಹೇಳಿರಮ್ಮಾ ಒಂದು ಮಾತಿನಲಿ
ಬೆಂಡಾದೆನೇ ಅರಸುತ ನಾನಾದಾರಿಗಳಲ್ಲಿ
ಪುಂಡರೀಕಾಕ್ಷನು ದೋರನು ಎಲ್ಲಿ ಮಣಿ
ಕುಂಡಲ ಮಂಡಿತ ಗಂಡ ಕಪೊಲ ಪ್ರಚಂಡನ ಲೀಲೆ 1
ಒಮ್ಮೆ ಭಾವಿಕ ಗೋವಳರಾ ಆಟ ಪಾಟದಲಿರುವಾ
ಒಮ್ಮೇ ಕಾಮುಖ ಗೊಲ್ಲತೇರಾ ಚಿತ್ತಕಾನಂದ ನೀವಾ
ಒಮ್ಮೆ ಯಜ್ಞ ಪತ್ನಿಯರಾ ಸವಿಯಾಟ ಕವಲಿವಾ
ಅಮ್ಮ ಒಂದೇ ಠಾರ್ವೆನೇ ಹೇಳುವಾ ಅವ ನಿಮ್ಮವನೇ
ತಮ್ಮನೇ ಸುಮ್ಮನೇ ತಿರುಗುತ ಘಮ್ಮನೇ ಝುಮ್ಮನೇ ಹೊಳೆವಾ 2
ಪುಲ್ಲ ನಾಭನ ಕಾಣದಿರೇ ಕಣ್ಣು ಕುರುಡವು ನಮ್ಮ
ಸೊಲ್ಲ ವಾಲಿಸದಿಹ ಹರಿಯಾ ಕಿವಿಬಧಿರವು ನಮ್ಮ
ಅಲ್ಲಿ ಮನುಜ ಮಹಿಪತಿಸುತ ಪ್ರಭು ಪರಬೊಮ್ಮ
ನಿಲದಪ್ಪಿ ಕೊಳಲು ಸಂಭ್ರಮಾ ಅವನೆಲ್ಲೆಲ್ಲ ನೋಡಲು
ಅಲ್ಲಲ್ಲಿ ನಿಂದಿಹ ಇಲ್ಲದ ಸ್ಥಳವಿಲ್ಲವಮ್ಮಾ 3