ರಾಮ ಶ್ರೀ ರಘುನಂದನ ಶರಣು ಸಾರ್ವ-
ಭೌಮ ಭೂಸುರವಂದ್ಯ
ಸೋಮಶೇಖರಮಿತ್ರ ಕಾಮಿತ ಫಲದಾತ್ರ
ಸನ್ನುತ ಸೀತಾ ಪ.
ಕ್ರೂರ ದಾನವ ಸಂಹಾರ ಕೌಸಲ್ಯಾಕುಮಾರ ಭೂ-
ಭಾರಹರ ಭಜಕÀಜನೋದ್ಧಾರ ವೇದಾಂತಸಾರ
ಚಾರುವದನ ಮಣಿಹಾರ ಕುಂಡಲಧರ
ವೀರರಾಘವ ವಿಶ್ವಾಧಾರ ಕರುಣಿಸು ಸೀತಾ 1
ಪಾಪರಹಿತ ಪಾವನ ಚರಿತ ಅಹಲ್ಯಾ
ಹರಣ ದಿವ್ಯರೂಪ ರಮಾರಮಣ
ತಾಪ ವಿಚ್ಛೇದನ ತಾಮಸ ಗುಣಹರಣ ದ-
ಯಾಪರ ಬ್ರಹ್ಮಸ್ವರೂಪ ಮೂರುತಿ ಸೀತಾ 2
ಮಾಧವ ಪುಣ್ಯಚರಿತ
ಕರುಣಾಪಾಂಗ ಹೆಳವನಕಟ್ಟೆ ರಂಗಯ್ಯ
ಸದಾನಂದ ಸುಮತೀಂದ್ರ ಹೃದಯ ಪಂಕಜಭೃಂಗ
ಕದನ ವಿಕ್ರಮ ಬಾಹು ಕೋದಂಡಧೃತ ಸೀತಾ 3