ಪಾಲಿಸೆನ್ನ ಪಾರ್ವತೀಶ ಫಾಲಲೋಚನ
ಲಾಲಿಸೆನ್ನ ನುತಿಯ ದೇವ ಕಾಲಕಂಧರ ಪ
ಪುಲ್ಲನಯನ ಚಲ್ವವದನ ಮಲ್ಲಿಕಾರ್ಚಿತ
ಬಿಲ್ವ ಪಲ್ಲವಾದಿಪ್ರಿಯನೆ ಶೈಲಜಾಪತೆ 1
ವಿನುತ ಪಂಕಜಪ್ರಿಯ
ಸಂಕಟಾದ್ರಿ ದೇವರಾಜ ಲೋಕಪಾಲಕ 2
ಪಾಹಿ ಪಾಹಿ ಕಾಲಕಾಲ ಮೋಹನಾಶಕ
ಸ್ನೇಹದಿಂದಲೆನ್ನ ಬಿಡದೆ ವಾಮದೇವನೆ 3
ಧಾನವಾಂತಕಾದಿ ಹೃದಯ ಜೀವ ರೂಪನೆ
ಕಮಲ ಭಾನುರೂಪನೆ 4