ಕರುಣಿಸೆನ್ನೊಳು ದೀನಬಂಧು ಪ.
ಕರುಣಿಸೆನ್ನೊಳಿರುವ ಸಕಲದುರಿತಜಾತ ರೋಗಗಳನು
ಪರಿಹರಿಸಿ ಪಾದಾರವಿಂದ ಸಿರದೊಳಿರಿಸಿ ಸಲಹು ಬೇಗ ಅ.ಪ.
ಮೂರು ವಿಧದಲಿ ಸುತ್ತಿಕೊಂಡ ಘೋರ ತಾಪದಿ
ಸೂರೆಗೊಳುವ ಗಹನ ಸಂಸಾರ ಕೂಪದಲ್ಲಿ ಬಿದ್ದು
ಚೀರುತಿಹೆನು ಚಿತ್ತದಲ್ಲಿ ತಾರೊ ತರಳಗೊಲಿದ ದೇವ 1
ಆದಿ ಭೌತಿಕಾದೇಹಜನಿತಾಗಾಧ ಮೋಹ ತಾ
ಬಾಧೆ ಸಹಿಸಲಾರೆ ಮುನಿಸಮಾಧಿಗಮ್ಯ ನಿನ್ನ ಮರವ
ವೇಧೆ ವದಗಿ ಬರುವ ಮೊದಲೆ ಮಾಧವನೆ ಮದೀಯನೆಂದು 2
ಮಂದನಾದೆನು ಮಮತೆಯಿಂದ ಕುಂದಿಹೋದೆನು
ಮುಂದುಗಾಣವಂದ ಕಾಣದಿಂದು ನಿನ್ನ ಬೇಡಿಕೊಂಬೆ
ಇಂದಿರೇಶ ವೆಂಕಟೇಶ ಎಂದು ನಿನ್ನ ಪದವ ಕಾಂಬೆ 3