ಒಟ್ಟು 214 ಕಡೆಗಳಲ್ಲಿ , 59 ದಾಸರು , 184 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು
ಸ್ಮರಣೆಯೊಂದಿರೆ ಸಾಲದೆ ಶ್ರೀಹರಿನಾಮ ಪ.Àರುಣಾಕರ ನಿಜ ಶರಣ ರಕ್ಷಾಮಣಿತರಣಿಕೋಟಿಭಾಸುರ ಶ್ರೀನಾರಾಯಣನ 1ಕಾಲನವರ ಕಂಡು ಬಾಲನ ಕರೆದಗೆಸಾಲೋಕ್ಯವಿತ್ತ ಶ್ರೀನಾರಾಯಣನ 2ತರಳಪ್ರಹ್ಲಾದನು ಕರೆಯೆ ಕಂಬದಿ ಬಂದುನರಮೃಗೇಂದ್ರನಾಗಿ ಪೊರೆದ ನಾರಾಯಣನ 3ಮಾತೆಯ ಸವತಿಯ ಮಾತಿಗಾಗಿ ಬಂ-ದಾತನ ಕಾಯ್ದ ಶ್ರೀನಾಥ ನಾರಾಯಣನ 4ಮೊಸಳೆಯ ಬಾಧೆಗೆ ಹಸಿದು ಕೂಗಲಾಗಿಬಸವಳಿದಿಹನ ರಕ್ಷಿಸಿದ ನಾರಾಯಣನ 5ಕಾದೆಣ್ಣೆಯೊಳು ಕರುಣೋದಯದಿ ಸುಧನ್ವ-ಗಾದರಿಸಿ ರಕ್ಷಿಸಿದಾದಿನಾರಾಯಣನ 6ಮಾರಜನಕರಮಾರಮಣ ಲಕ್ಷ್ಮೀ-ನಾರಾಯಣನ ಪಾದಾರವಿಂದಯುಗ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸ್ಮರಿಸು ಮನವೆ ಸ್ಮರಿಸು ಸ್ಮರನ ಪಿತನದುರಿತಭವಭಯಸಮೂಹದೂರಮಾವರನಪ.ಒಬ್ಬ ಬಾಲನಯ್ಯನ ಒದೆದಒಬ್ಬ ಬಾಲಗಟವಿಲೊಲಿದಒಬ್ಬ ಬಾಲನ ಅಪ್ಪಿ ರಾಜ್ಯವ ಒಬ್ಬ ಬಾಲಗಿತ್ತುಒಬ್ಬ ಬಾಲೆಯುಂಗುಟದಿ ಪೆತ್ತಒಬ್ಬ ಬಾಲೆಯುಂಗುಟದಿ ಪೊತ್ತಒಬ್ಬ ಬಾಲೆಗಕ್ಷಯ್ಯೆಂದು ಕುಕ್ಷಿಲೊಬ್ಬ ಬಾಲಪನ 1ಇಬ್ಬರ ಮೂರುಸಾರೆಲಳಿದಇಬ್ಬರಿಹ ಭೂಜವ ಮುರಿದಇಬ್ಬರೊಗ್ಗೂಡಿ ಬೆಳೆದು ಹನ್ನಿಬ್ಬರ ಬಡಿದಇಬ್ಬರ ಕಾರಾಗಾರ ತಗಿದಇಬ್ಬರುಪ್ಪು ಬೇಡಲಿ ಸದೆದಇಬ್ಬರಿಂದೈದಿ ಹೋಳಮಯ್ಯನ ನಿಬ್ಬರಿಸಿದನ 2ಮೂರು ಮನೆಯೊಳಗಿಹನಮೂರುಮಾತಿಗೆ ಹೊಂದದವನಮೂರು ಮೈಯನ ಕೃತ ಸೇವೆಗೆ ಮೂರು ರೂಪಾದನಮೂರು ಪೊಳಲ ಹಗೆಕಾರನಮೂರುವೆಂಬನುರುಹಿದನಮೂರಾಂತಕ ಪ್ರಸನ್ವೆಂಕಟ ಮೂರು ಲೋಕೇಶನ 3
--------------
ಪ್ರಸನ್ನವೆಂಕಟದಾಸರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು