ಏನಿದೇನಿದನ್ಯಾಯ ಕೇಳಲಾಗದಯ್ಯ
ಧ್ಯಾನದಿಂದಾನೆಂಬ ಹೀನ ಜನರ್ವಚನ ಪ
ಪರಮಪುರುಷರ ಚರಿತ ಪರಮ ಭಕ್ತಿಯಲಿಂದ
ಬರೆದೋದಿಕೇಳಿದರೆ ಪರಮಪದವೆನುತ
ವರವೇದ ಸ್ಮøತಿವಾಕ್ಯ ಅರಿದರಿದು ಸಚ್ಚರಿತ
ಬರೀಬಾರದೆನ್ನುವ ನರಗುರಿಗಳ ವಚನ 1
ಕನಸುಮನಸಿನೊಳೊಮ್ಮೆ ಜನಕಜೆಯವರನಂಘ್ರಿ
ನೆನೆವರ್ಗೆ ಭವಬಂಧವಿನಿತಿಲ್ಲವೆನುತ
ಮನುಮುನಿಗಳ್ಬರೆದಿಟ್ಟ ಘನತರದ ವಚನಗಳನು
ಮನನ ಮಾಡಳಿವ ಬಿನಗುಜನರ್ವಚನ 2
ಬೀಳುತೇಳುತಲೊಮ್ಮೆ ನೀಲಶ್ಯಾಮನ ದಿವ್ಯ
ಮೇಲು ಮಹಿಮೆಯ ಮನದಾಲಿಸಲು ಜವನ
ದಾಳಿ ಸೋಂಕದು ಎಂದು ಶೀಲದೊರೆದ್ವಚನಗಳ
ಕೇಳಿ ತಿಳಿಯದ ಮಹ ಕೀಳುಜನರ್ವಚನ 3
ಹರಿನಾಮ ಕೀರ್ತನೆಯಿಂ ಜರಾಮರಣ ಕಂಟಕª À
ಕಿರಿದು ಮಾಡಿ ದಾಟಿದರು ಗುರುಹಿರಿಯರೆಲ್ಲ
ನಿರುತ ನಿಜ ತಿಳಿಯದೆ ಹರಿಸ್ಮರಣೆ ಸ್ಮರಿಸದೆ
ಬರಿದೆ ಬ್ರಹ್ಮೆಂಬ ಮಹನರಕಿಗಳ ವಚನ 4
ಪರಮ ಶ್ರೀಗುರುರೂಪ ವರದ ಶ್ರೀರಾಮನಂ
ನೆರೆನಂಬಿ ಒಲಿಸದೆ ಗುರುವಾಗಿ ಜಗದಿ
ಅರಿವಿತ್ತು ಆತ್ಮನ ಕರುಹು ತೋರಿಸಿ ಪರಮ
ಪರತರದ ಮೋಕ್ಷಮಂ ಕರುಣಿಸುಯೆಂತು 5