ಒಟ್ಟು 3489 ಕಡೆಗಳಲ್ಲಿ , 122 ದಾಸರು , 2373 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೇಗೆ ಮಾಡಲಿ ಮಗುವಿಗೇನಾಯಿತೊ - ಇದರ - |ಆಗಮವ ಬಲ್ಲವರು ತಿಳಿದೆಲ್ಲ ಪೇಳಿ ಪ.ತೂಗಿ ಮಲಗಿಸೆ ಕಣ್ಣ ಮುಚ್ಚಲೊಲ್ಲನು, ಬೆನ್ನ - |ಮೇಗೆ ಬುಗುಟಿಯು, ಎದೆಯು ಕಲ್ಲಾಗಿದೆ |ರೋಗವನೆ ಕಾಣೆ ದಾಡೆಯಲಿ ನೀರಿಳಿಯುತಿದೆ |ಕೂಗುವ ಧ್ವನಿಯೊಮ್ಮೆ ಕುಂದಲಿಲ್ಲ 1ಖಂಡಸಕ್ಕರೆ ಹಣ್ಣ ಕೊಟ್ಟರೊಲ್ಲದೆ ಮಣ್ಣ |ಹೆಂಡೆಯನು ಬೇಡಿ ತಾ ಪಿಡಿವ ಕೊಡಲಿ ||ಮಂಡೆ ಜಡೆಗಟ್ಟಿಹುದು ಮಾಡಲಿನ್ನೇನಿದಕೆ |ಹಿಂಡುಸತಿಯರ ದೃಷ್ಟಿ ಘುನವಾಯಿತೇನೊ2ಮೊಲೆಯನುಂಬಾಗ ಮೈಯಂಬರವನೊದೆಯುತಿದೆ |ಕಲಕಿತದಲಿ ಎನ್ನ ಕೊಲುವುದೇಕೋ ||ತಿಳಿದಿದರ ನೆಲೆಯನರಿತವರನೊಬ್ಬರ ಕಾಣೆ |ಚೆಲುವಸಿರಿಪುರಂದರವಿಠಲ ತಾ ಬಲ್ಲ3
--------------
ಪುರಂದರದಾಸರು
ಹೇಮದ ತೊಟ್ಟಿಲ ಭಾಮೆಯರ್ಹೂಡಿಕೋಮಲ ಕಾಂಚನಧಾಮವ ಮಾಡಿಕಾಮಜನಕನೊಳು ಕಾಮಿತ ಬೇಡಿಪ್ರೇಮದಿ ತೂಗಿದರ್ನಾಮದಿ ಪಾಡಿ ಜೋ ಜೋ 1ಚೆನ್ನಿಗರರಸ ಮೋಹನ್ನ ಸುಶೀಲಕನ್ನಡಿ ಕದಪಿನಕಮನೀಯಬಾಲಪುಣ್ಯವೃಕ್ಷಗ ಫಲ ಪೂರ್ಣೇಂದು ಲೀಲನಿನ್ನ ರಕ್ಷಿಸಲಿ ಪ್ರಸನ್ನ ಗೋಪಾಲ ಜೋ ಜೋ 2ಕೆಂದಾವರೆಯಂತೆ ಚೆಂದುಳ್ಳಚರಣಚಂದಿರವದನ ಗೋವಿಂದನ ಶರಣಮುಂದಿನ್ನು ಸೌಭಾಗ್ಯ ಹೊಂದೆನ್ನ ತರುಣಕಂದ ಕಂದರ್ಪನ ಸುಂದರಾಭರಣ ಜೊ ಜೋ 3ಶ್ರೇಯಾರೋಗ್ಯ ದೀರ್ಘಾಯು ಸಂಪೂರ್ಣನ್ಯಾಯ ನೀತಿ ಸದುಪಾಯ ಸಂಪನ್ನಪ್ರೀಯನೆ ಕರ್ಣಾಂತಾಯತನಯನಕಾಯಲಿ ಲಕ್ಷ್ಮೀನಾರಾಯಣ ನಿನ್ನ ಜೋ ಜೋ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು