ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಪ
ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ 1
ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ 2
ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ 3
ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ 4
ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ 5