ಜಗದಯ್ಯಾ ಜಗದಯ್ಯಾ
ಜಗತ್ರಾಣ ಜಗಜೀವನ ಪಾವನ ಪ
ಸಾವು ಹುಟ್ಟುಯೆಂಬ ಹೇಯಕುಣಿಯೊಳು ಬಿದ್ದು
ನೋಯಲಾರದೆ ಬಲು ಬಾಯಬಿಡುತ ನಿಮ್ಮ
ಪಾವನ ಪಾದಕ್ಕೆ ಮರೆಯಬಿದ್ದೆನಯ್ಯ
ಸೇವಕಜನರಯ್ಯಾ ಕಾಯೋ ಎನ್ನಾರ್ಯ 1
ಪರಿಭವಶರಧೆಂಬ ಉರಿವಕಿಚ್ಚಿನೊಳು
ಪರಿಪರಿಮರುಗುತ ಕರುಣಾಂಬುಧಿ ನಿನ್ನ
ಅರಿವಿಟ್ಟರಿದೆ ವರ ಪರಮ ಬಿರುದುಗಳು
ಶರಣಾಗತರ ಪ್ರಿಯಕರ ಪಿಡಿದೆತ್ತಯ್ಯ 2
ವಿಷಯಲಂಪಟವೆಂಬ ವ್ಯಸನಕೂಪದಿ ಬಿದ್ದು
ಬಸವಳಿದನುಪಮ ದೆಸೆಗೆಟ್ಟೆ ಕುಸುಮಾಕ್ಷ
ಶಿಶುವಿನ ತವಪಾದ ಅಸಮದಾಸಜನ
ರೊಶದಿ ಇಟ್ಟು ಪೊರೆ ಕುಶಲಮತಿಯ ನೀಡಿ3
ಭವಭವದಲಿ ಬೇಡುವೆನಭವನೆ ಬಾಗಿ
ದಯಪಾಲಿಸಿ ಸ್ಥಿರಜ್ಞಾನಸುಪದವ
ಭವಗುಣಹಿಂಗಿಸಿ ದಿವನಿಶೆನ್ನುವುದಕೆ
ಸವಿನಾಮವಿತ್ತು ಕಾಯೋ ಭವರೋಗವೈದ್ಯನೆ 4
ಮೂರರಿಂ ಗೆಲುವಿತ್ತು ಮೂರರಿಂದಾಂಟಿಸಿ
ಮೂರರ ಮೋಹನಿವಾರಿಸು ದೇವ
ಮೂರು ನಿನಗರ್ಪಿಸಿ ಸಾರಿಬೇಡುವೆ ನೀಡ
ಪಾರಮೋಕ್ಷಪದ ಧೀರ ಶ್ರೀರಾಮಯ್ಯ 5