ಬೆಳಗಾಯಿತು ಕೇಳಿ ಭ್ರೂಮಧ್ಯ ಮಂಟಪದೊಳಗೆಬೆಳಕು ಪಸರಿಸುತಿದೆಕೊ ಎತ್ತಿತ್ತ ನೋಡೆಮುಂಬೆಳಕು ಕಾಣಿಸುತ್ತ ರವಿಕೋಟಿಯಂ ಪಳಿಯುತಿದೆನಿರ್ಮಳ ನೋಡಲುಪ್ಪವಡಿಸ ಯತಿರಾಜ ಪ
ಷೋಡಶಾಕಾರವಹ ಸೋಮ ಕಳೆಗುಂದಿಹುದುಖೋಡಿ ಜನನ ಮರಣ ಚಕ್ರ ತಾ ಕೊರಗಿದುದುಪಾಡಳಿದು ಜೀವಶಿವ ಶೈತ್ಯ ಬಿಟ್ಟಾಡಿದುದುಆರೂಢನೊಲಿದುಪ್ಪವಡಿಸ ಯತಿರಾಜ1
ತಾಪತ್ರಯಗಳೆಂಬ ರಾತ್ರಿ ತಾ ಜಗುಳಿದುದುಪಾಪಿ ಇಹಪರವೆಂಬ ಸುಳಿಗಾಳಿ ಜಾರಿದುದುಕೋಪಿ ಸಪ್ತವ್ಯಸನ ಗೂಗೆ ಕಣ್ಣುಡುಗಿದುದುನಿರ್ಲೇಪನುಪ್ಪವಡಿಸ ಯತಿರಾಜ2
ಅಷ್ಟ ಪ್ರಕೃತಿಗಳೆಂಬ ನಕ್ಷತ್ರವಡಗಿದವುದುಷ್ಟ ಪಂಚೇಂದ್ರಿಯದ ಕುಮುದಗಳು ಬಾಡಿದವುನಷ್ಟರಾರುವರೆಂಬ ಶಿವನಿಕರ ವೋಡಿದವುಶಿಷ್ಟ ನೀನೊಲಿದುಪ್ಪವಡಿಸ ಯತಿರಾಜ3
ಭ್ರಮರ ಕಮಲ ತಾನಿಲ್ಲಿ ಬಿರಿಯುತಿದೆನಿಶ್ಚಿಂತನೊಲಿದುಪ್ಪವಡಿಸ ಯತಿರಾಜ 4
ಮೂರ್ತಿ ಚಿದಾನಂದಗುರುನಾಥನುಪ್ಪವಡಿಸ ಯತಿರಾಜ 5