ಭಕುತಿಯಲಿ ಭಜಿಸಿ ಹರಿಯ ಸುಖಿಸಬಾರದೇ ಪ
ಪ್ರಕಟದಿ ಸಜ್ಜನ ನಿಕಟದಿ ತಾಮಸ|
ಶಕಟ ಮುರಿದ ಸುರ ಮುಕುಟ ಮಣಿಯಾ ಅ.ಪ
ತರಣೀಯಾ ಕೋಟಿ ಪ್ರಕಾಶದಿ ಧರಣಿಯಾ ರಮಣನ ನಾಮ|
ಕರಿ ಕಿರಿಯನೆ ಶಿರಿ|
ಗರುಡಗರಿಯದೇ ಭರದಿ ತಾ ಬರುತದೆ ಶರಣರಾ ಹೊರೆದ 1
ಮರುವಿನ ಕತ್ತಲೆ ನೂಕುವ ಚರಣವ ಅರವಿನ ದೀಪವ ಹಚ್ಚಿ|
ಕುರುವಿನಾ ಚಿನ್ಮಯ ನೊಡಲು ಗುರುವಿನಾ|
ಚರಣವ ಪೂಜಿಸಿ ಕರುಣವ ಸಾಧಿಸಿ
ತರುಣೋಪಾಯದ ಚರಣವ ಬಲಿಯೋ 2
ಮನವಧಾನದಿ ನಿಲಿಸಿ ತನುವನಾ ಸೇವೆಗರ್ಪಿಸಿ|
ಘನವನು ಮಾಡುತಾ ಸುಜನರಾ ಅನುವನು ಕನಸಿಲೇ|
ಘನ ಗುರು ಮಹಿಪತಿ-ಜನ ಪ್ರಭುವಿನ ಅನುದಿನದಲಿ ಪಾಡಿ3