ಒಟ್ಟು 18 ಕಡೆಗಳಲ್ಲಿ , 8 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೋದ್ಯಾ ಶೇಷಗಿರಿದಾಸ ಸುಲಭ ಹಾದಿಯನು ಮೆಟ್ಟಿ ನಮ್ಮನು ಭವಾಬ್ದಿಯೊಳಿಟ್ಟು ಪ ಸಲಹಿದೆನು ಸಾಕಿದೆನು ಕಾಲಕಾಲಕೆ ನೋಡಿ ತಿಳಿಸಿದೆನು ತತ್ವಗಳು ನಿರುತ ಬಿಡದೆ ಬಳಿವಿಡಿದು ತಿರುಗಿ ಉಣಿಸಿದೆನು ಉಡಿಸಿದೆನು ವೆ- ಗ್ಗಳವಾಗಿ ನೋಡಿ ಸುಖಿಸಿದೆನೊ ಮಾತಾಡಿ 1 ನಿನ್ನ ಮ್ಯಾಲಿನ ಕರುಣ ಕಮಲಾಕ್ಷ ವೇಗದಲಿ ಎನ್ನಮ್ಯಾಲೆ ಇನ್ನು ಮಾಡಲಿಲ್ಲ ಮುನ್ನೆ ಸಾಧನ ಪೂರ್ತಿ ನಿನಗಾಯಿತೇನೋ ಸಂ ಪನ್ನಮತಿ ಉಳ್ಳವನೆ ಸಜ್ಜನ ಶಿರೋಮಣಿ 2 ಧಿಕು ಎನ್ನ ಜನುಮ ನಿನ್ನಂಥ ಪ್ರಿಯನ ಬಿಟ್ಟು | ಅಕಟಕಟ ಭೂಮಿಯೊಳು ಬದುಕುವದೂ | ಸಿರಿ ವಿಜಯವಿಠ್ಠಲ ನಿನ್ನ ಭಕುತಿಗೆ ಮೆಚ್ಚಿ ತಡಮಾಡದಲೆ ಕರದೊಯ್ದು 3
--------------
ವಿಜಯದಾಸ