ಒಟ್ಟು 19 ಕಡೆಗಳಲ್ಲಿ , 14 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾವಧಾನಾಗಿ ಮಾಡೆಲೋ ಗುರುಭಕ್ತಿ | ಕಾವಕರುಣಾಳುದೋರಿ ನಿಜ ಮುಕ್ತಿ ಪ ಗುರುನಾಮ ಸ್ಮರಣೆ ಅನುದಿನಾ | ಗುರುಮೂರ್ತಿಯ ಮಾಡಿ ನಿಜಧ್ಯಾನಾ | ಗುರುಚರಣವ ಪೂಜಿಸು ನಿಧಾನಾ | ಗುರು ನಮನದಿ ಹಾಕಿ ಲೋಟಾಂಗಣಾ 1 ಗುರುಭಕ್ತರ ಸಂಗವನು ಮಾಡಿ | ಗುರು ಕರುಣದ ಮಹಿಮೆಯ ಪಾಡಿ | ಗುರುವಾಕ್ಯ ಪ್ರಸಾದವನು ಬೇಡಿ | ಗುರು ಅಭಯವ ಕೊಂಡು ನಲಿದಾಡಿ 2 ಗುರುವಿನಲ್ಲಿ ಹಿಡಿಯದೆ ನರಭಾವಾ | ಗುರುವಿಗರ್ಪಿಸಿ ತನುಧನ ಮನ ಜೀವಾ | ಭವ ಬಂಧನವಾ | ಗುರುಮಹಿಪತಿ ಬಾಲನಾಗಿರುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಾಸುದೇವ ನಿನ್ನವರ್ಮ ಕರ್ಮಂಗಳದೇಶ ದೇಶದೊಳು ಹೇಳಲೆ ? ಪಬೇಸರಿಯದೆ ಎನ್ನ ಹೃದಯ ಕಮಲದಲ್ಲಿವಾಸವಾಗಿ ಸುಮ್ಮನಿರುವೆಯೊ ? ಅ.ಪಮತ್ಸರೂಪನಾಗಿ ಮನಸು ಕಾಣಿಸಿಕೊಂಡು ಮಕ್ಕಳತಿದ್ದಿದ್ದು ಹೇಳಲೆ ?ಉತ್ಸಾಹದಿಂದ ನಿಗಮವ ತಂದು ಬ್ರಹ್ಮಗೆ ಮೆಚ್ಚಿಕೊಟ್ಟದ್ದು ನಾ ಹೇಳಲೆ 1ಕಡಗೋಲು ಮಂಡೆಯಂದದಿ ಕೈಕಾಲು ಮುದುಡಿಕೊಂಡದ್ದು ನಾ ಹೇಳಲೆ ?ಕಡಲೊಳಗಿಂದ ಪಾತಾಳಕೆ ಇಳಿದಿಳೆ ಪಡೆದಾತನ ಸುದ್ದಿ ಹೇಳಲೆ 2ಹುಚ್ಚುಮನಸುಮಾಡಿ ಕಚ್ಚುತ ಕೆದರುತ ರಚ್ಚೆಯಿಕ್ಕಿದಸುದ್ದಿ ಹೇಳಲೆ ?ಮುಚ್ಚಿದ ಭೂಮಿಯ ಹಲ್ಲಿಂದ ಕಿತ್ತಿದ ಹೆಚ್ಚುತನವ ನಾನು ಹೇಳಲೆ 3ಕಂದನ ಮಾತಿಗೆ ಕಡುಕೋಪದಿಂ ಬಂದು ಕಂಬವನೊಡೆದದ್ದು ಹೇಳಲೆ ?ಕುಂದದೆ ಹಿರಣ್ಯಕಶಿಪುವಿನುದರ ಸೀಳಿ ಕರುಳ್ಮಾಲೆಧರಿಸಿದ್ದು ಹೇಳಲೆ 4ಬಾಲನಾಗಿ ಬ್ರಹ್ಮಚಾರಿ ವೇಷವ ತೋರಿ ಬಲಿಯ ಬೇಡಿದುದನು ಹೇಳಲೆ ?ಲೀಲೆಯಿಂದಲಿ ಧರೆಯಈರಡಿ ಮಾಡಿದ ಜಾಲತನ್ವನುನಾನು ಹೇಳಲೆ5ಹೆಸರಿಲ್ಲದೆ ಹೋಗಿ ಹೆತ್ತತಾಯ್ ತಲೆಕುಟ್ಟಿ ಕೊಡಲಿಯ ಪಿಡಿದದ್ದು ಹೇಳಲೆ ?ಸೋಸಿ ದೈತ್ಯರನೆಲ್ಲ ರೋಸಿ ಪ್ರಾಣವ ಕೊಂಡ ದೋಷತನವ ನಾನು ಹೇಳಲೆ 6ತಾಯ ಮಾತನೆಕೇಳಿ ತಮ್ಮನ ಒಡಗೂಡಿಅಡವಿಯೊಳಿದ್ದುದು ಹೇಳಲೆ ?ಮಾಯಾಸೀತೆಗಾಗಿ ರಾವಣನನು ಕೊಂದು ಮಹಿಮೆಯ ನೆರೆದದ್ದು ಹೇಳಲೆ ? 7ತರಳತನದಲಿ ದುರುಳನಾಗಿ ಬಂದ ಒರಳೆಳೆತಂದದ್ದು ಹೇಳಲೆ(ಬೆರಳಿಂದ ಗಿರಿಯೆತ್ತಿ ಕಂಸನ ಕೊಂದ ಆ ) ದುರುಳತನದ ಸುದ್ದಿ ಹೇಳಲೆ 8.............................................................................................................................................................................. 9ರಾಯ ರಾವುತನಾಗಿ ರಾಯರ ಮನೆ ಪೊಕ್ಕು ಕಡುಗವ ಪಿಡಿದದ್ದು ಹೇಳಲೆ ?ಆಯತದಿಂದ ಕಲಿಯಲಿದ್ದು ಮನುಜರ ಮಾಯವ ತೋರಿದ್ದು ಹೇಳಲೆ 10ಧರೆಯೊಳಗಧಿಕವಾದ ಉರಗಗಿರಿಯಲ್ಲಿ ಸ್ಥಿರಿವಾಗಿನಿಂತದ್ದು ಹೇಳಲೆ ?ಕರುಣದಿಂ ಭಕುತರ ಪುರಂದರವಿಠಲನೆಂದು ನಾ ಹೇಳಲೆ 11 *
--------------
ಪುರಂದರದಾಸರು
ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು