ಎಲೊ ರಂಗ ಎಲೋ ರಂಗನೇ
ಸಲಹೊ ಶುಭಾಂಗನೆ ಪ
ಜಯಕರ ಶ್ರೀಹರಿಯೆ ದಯವಂತನಾಗಯ್ಯ
ಭಯ ಭಕ್ತಿಯಲಿ ನಿಮ್ಮ ದಯವ ಬೇಡುವೆನಯ್ಯ 1
ನಿನ್ನ ಭಕ್ತನು ನಾನು ಬನ್ನಬಡಿಸುವಿ ಯಾಕೋ
ಮುನ್ನಿನ ಭಕ್ತರಂತೆನ್ನನು ಸ್ಮರಿಸಯ್ಯ 2
ಶರಣೆಂದು ವಿಭೀಷಣಗೆ ಕರುಣಿಸಿ ಲಂಕೆಯ
ಸ್ಥಿರಪಟ್ಟ ಕೊಟ್ಟಂಥ ಕರುಣಾಳು ಮೊರೆ ಕೇಳೊ 3
ಯತಿವರನ ಯಾಗವ ಹಿತದಿ ರಕ್ಷಿಸಿದಂಥ
ಪತಿತಪಾವನ ಎನ್ನ ಹಿತದಿಂದ ಕಾಯೆಲೊ 4
ಸತತ ನಿಮ್ಮಯ ಪಾದಸ್ತುತಿಯೊಳಿರಿಸಿ ಎನ್ನ
ಮೃತ್ಯುಬಾಧ್ಹರಿಸಯ್ಯ ಕ್ಷಿತಿವರ ಶ್ರೀರಾಮ 5