ಕರುಣಾದಿ ಪೊರೆಯನ್ನ ಪಾರ್ವತೀರಮಣ
ಪುರಹರನೆ ಕರುಣಿಪುದೆಮಗೆ ಸುಜ್ಞಾನ ಈ ಪ
ಧರಣಿಯೊಳು ಗೂಗಲ್ಲು ಕ್ಷೇತ್ರ ಸುಮಂದಿರನೆ ನಿನ್ನ
ಅನುದಿನ ಅ.ಪ
ದುರಿತ ಗಜ ಪಂಚಾಸ್ಯ ಕರಮುಗಿವೆ
ನೆರೆನಂಬಿನಿನ್ನನು ಶೇವಿಸುವ ಶರಣರಿಗೆ ಸುರತರುವೆ
ಜನಿಸಿರುವರೊಳು ಸರ್ವರಿಗೆ ಮನದಲಿ ಪ್ರೇರಿಸುವ ಗುರುವೆ
ಗೂಗಲ್ಲಪ್ರಭುವೆ 1
ಭಾಗವತಸು
ತಿಳಿಸೆನ್ನ ಮನಕೆ
ಜಿತ ಮನೋಜಾತ 2
ಪರಿಪಾಲಿಸಲು ಶಿವನೆ ರಾಜಿಸುವ
ಕೃಷ್ಣಾಕೂಲದಲಿ ನಿಂದಿರುವಿ ಶಂಕರನೇ ಜನಮೇಜಯಾಖ್ಯ
ಪಾದ ಸುವಿಶಾಲ ಮಹಿಮನೇ 3
ನೀಡಿದೆಯೊ ಗೌತುಮ
ಮನಮಂದಿರದಿ ಗೋ-
ವಿಂದನಂಘ್ರಿಯ ಕಾಂಬುವೊ ಬಗೆಯ ತೋರೆನಗೆ ಜೀಯ4
ಶ್ರೀಶ್ವೇತಗಿರಿ ಸುಕ್ಷೇತ್ರ ಪಂಚ ಕ್ರೋಶಗನು ನೀನೆ
ಸರ್ವೇಶ ಕಾರ್ಪರ ವಾಸಸಿರಿ ನರಕೇಸರಿಗೆ ಪ್ರಿಯನೇ
ದುರ್ವಿಷಯದಲಿ ಅಭಿಲಾಷೆ ಪುಟ್ಟಿಸದಂತೆ ಶಶಿಧರನೆ
ಸಿರಿವ್ಯಾಸಕುವರನೇ5