ಒಟ್ಟು 18 ಕಡೆಗಳಲ್ಲಿ , 12 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಪ್ಪಿನ ಗಂಡನ ಒಲ್ಲೆನೆ |ತಪ್ಪದೆ ಪಡಿಪಾಟ ಪಡಲಾರೆನವ್ವ............ ಪ.ಉದಯದಲೇಳಬೇಕುಉದಕ ಕಾಸಲು ಬೇಕು |ಹದನಾಗಿ ಬಜೆಯನು ಅರೆದಿಡಬೇಕು ||ಬದಿಯಲಿ ಎಲೆ ಅಡಿಕೆ ಕುಟ್ಟಿಡಬೇಕು |ಬಿದಿರಕೋಲು ತಂದು ಮುಂದಿಡಬೇಕು 1ಪಿತ್ತವೋಕರಿಕೆ ಮುದುಕರಿಗೆ ವಿಶೇಷವು |ಹೊತ್ತುಹೊತ್ತಿಗೆ ಜೊಲ್ಲ ಚೆಲ್ಲಬೇಕು ||ಮೆತ್ತನವೆರಡು ಮುದ್ದಿಯ ಮಾಡಲುಬೇಕು |ಒತ್ತೊತ್ತಿ ಕೂಗಿ ಕರೆಯಲುಬೇಕು ....... 2ಜಾಡಿ ಹಾಸಬೇಕು ನೋಡಿ ಬಾಡಬೇಕು |ಅಡಗಡಿಗೆ ಕಣ್ಣೀರ ಸುರಿಸಬೇಕು ||ಒಡೆಯ ಶ್ರೀ ಪುರಂದರವಿಠಲನ ನೆನೆಯುತ |ಮಿಡಿಗೊಂಡು ಮೂಲೆಗೆ ಒರಗಬೇಕು 3
--------------
ಪುರಂದರದಾಸರು
ಸ್ಥಳವಿಲ್ಲವೈ ಭಾಗವತರೇ - ಈಗಒಳಗೆ ಹೊರಗೆಸಂದಣಿತುಂಬಿದೆ ನೋಡಿಪ.ಆಯ್ದೊಕ್ಕಲಿದರೊಳಗುಂಟು - ಮತ್ತೆಆಯ್ಕು ಮಂದಿಯ ಬೇರೆ ಉಂಟುಆಯ್ದು ನಾಲ್ಕು ಇದರೊಳಗುಂಟು - ನೀವುಬೈದರೆ ಏನು ತೆಗೆಯಿರಿ ನಿಮ್ಮ ಗುಂಟು 1ಆರುಮಂದಿ ಕಳ್ಳರುಂಟು - ಮತ್ತಾರು ಮಂದಿಗೆ ಮತ್ತೆ ಪ್ರೇರಕರುಂಟುಪ್ರೇರಕರಿಗೆ ಕರ್ತರುಂಟು - ವಿಚಾರಿಸುವುದಕೆ ನಿಮಗೇನುಂಟು ? 2ಅತ್ತೆಯವಳು ಬಲುಖೋಡಿ - ಎನ್ನಒತ್ತಿ ಆಳುವ ಪುರುಷನು ಬುಲುಹೇಡಿಮತ್ತೆ ಮಾವನು ಅಡನಾಡಿ - ಸರಿಹೊತ್ತಿಗೆಬರುವ ಮೈದುನ ಬಲುಕೇಡಿ3ನಗೆಹೆಣ್ಣು ಎಂಬುವಳು ಕೋಪಿ - ಮಲಮಗಳು ಕಂಡರೆ ಸೇರಳು ಬಲು ಪಾಪಿಹಗೆಗಾತಿಅತ್ತಿಗೆ ಶಾಪಿ - ಸುತ್ತಬೊಗಳುವಳು ತಾಳೆನು ನಾನು ಮುಂಗೋಪಿ 4ಎಷ್ಟು ಹೇಳಲಿ ನಿಮಗೆಲ್ಲ - ಈಕಷ್ಟ ಸಂಸಾರದೊಳಗೆ ಸುಖವಿಲ್ಲಸ್ಪಷ್ಟವಾಗಿ ಪೇಳ್ಪೆ ಸೊಲ್ಲ - ದೇವಸೃಷ್ಟೀಶ ಪುರಂದರವಿಠಲ ಬಲ್ಲ 5
--------------
ಪುರಂದರದಾಸರು
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು