ಒಟ್ಟು 429 ಕಡೆಗಳಲ್ಲಿ , 70 ದಾಸರು , 335 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತಿಗೆ ಸ್ವಾತಂತ್ರ್ಯವ ಕೊಡದಿರಿ - ನೀವುಮತಿಗೆಟ್ಟು ಭ್ರಮೆಯ ಬಡದಿರಿ ಪ.ಪತಿಗೆ ಬಣ್ಣನೆ ಮಾತನಾಡ್ಯಾಳು - ತಾನುಮತಿಯಿಲ್ಲದೆ ಮೆಚ್ಚನಾಡಳುಅತಿ ಹರುಷದಲಿ ಬಂದು ಕೂಡ್ಯಾಳು ಕೂಡಿಖತಿಕರಕರೆಯನು ಮಾಡ್ಯಾಳು1ತಂದೆ - ತಾಯ್ಗಳನೆಲ್ಲ ತೋರಿಸ್ಯಾಳು - ನೀಒಂದೆಡೆ ಬಾಯಿಂದು ಬರಿಸ್ಯಾಳುನಿಂದಿಸಿ ಬೆಯ್ಯುತ್ತ ಬೆರೆಸ್ಯಾಳು ನಿನ್ನನೊಂದಪಡಿಭತ್ತಕೆ ಬಾಯ ತೆರೆಸ್ಯಾಳು2ತಂದಿದ್ದರೊಳಗರ್ಧ ಕದ್ದಾಳು ಕದ್ದುತಂದು ಸುಳ್ಳಹೇಳಿ ಮೆದ್ದಾಳುಮುಂದಿದ್ದ ಕೂಸಿನ ಹೊದ್ದಳು - ಹತ್ತುಮಂದಿ ಮುಂದೆ ಅಡ್ಡಬಿದ್ದಾಳು 3ಉಂಡ ಊಟವನೆಲ್ಲ ನೆನೆಸ್ಯಾಳು - ತನ್ನಮಂಡೆ ಕೆದರಿಕೊಂಡು ಸೆಣಿಸ್ಯಾಳುಭಾಂಡು ಮಾಡಿ ಬಾಯಿ ತೆರಿಸ್ಯಾಳು - ನಿನ್ನಕೊಂಡಕೋತಿಯಂತೆ ಕುಣಿಸ್ಯಾಳು4ಕರೆತರೆ ಸಂಸಾರ ಸ್ಥಿರವಲ್ಲ - ಈದುರುಳ ಹೆಣ್ಣಿನ ಸಂಗ ಸುಖವಿಲ್ಲನೆರೆದೊರೆಯವರು ನಗುವರೆಲ್ಲ - ನಮ್ಮಪುರಂದರವಿಠಲನು ತಾ ಬಲ್ಲ 5
--------------
ಪುರಂದರದಾಸರು
ಸಲ್ಲದೋ ಕೃಷ್ಣ ಸಲ್ಲದೋಸಿರಿವಲ್ಲಭಇದನೋಡುಪಾಲಿಸಬೇಕೋಪಬಿತ್ತಿ ಬೆಳೆಸಿ ತಲೆಯೆತ್ತಿದ ಪೈರನುಮತ್ತೆ ತುರುವಿಂಡನು ಬಿಟ್ಟು ಮೆಲ್ಲಿಸುವುದು 1ಸಾವಿರ ಹೊನ್ನಿಕ್ಕಿ ಸದನವ ಸಾಧಿಸಿಪಾವಕನುರಿಗೆ ನೀನೊಪ್ಪಿಸಿ ಕೊಡುವುದು 2ಕುಶಲದಿ ಬಣ್ಣಿಸಿ ಬರೆದು ಚಿತ್ತಾರವಮಸಿ ಮಣ್ಣ ಮಾಡಿ ನೀ ಕೆಡಿಸುವುದು 3ಬಲುಕಾಲ ಮುದ್ದಿಸಿ ಕಲಿಸಿ ಮಾತುಗಳನುಗಿಳಿಯ ಸಾಕಿ ಬಾವುಗಗೆ ಒಪ್ಪಿಸುವುದು 4ಕರುಣಿಸುಸಿರಿಪುರಂದರವಿಠಲ ನಮ್ಮಹಿರಿದು ಮಾಡಿ ಮತ್ತೆ ಕಿರಿದು ಮಾಡುವುದು 5
--------------
ಪುರಂದರದಾಸರು
ಸಿಕ್ಕಿದನೆಲೆ ಜಾಣೆ ಶ್ರೀ ವೇಣುಗೋಪಾಲ |ಭಕ್ತವತ್ಸಲ ದೇವನು ಪಮಕ್ಕಳ ಚೆಂಡಿಕೆ ಮರದ ಕೊನೆಗೆಕಟ್ಟಿ|ಗಕ್ಕನೆ ಕೃಷ್ಣ ಚೆಪ್ಪಾಳಿಕ್ಕಿದನಮ್ಮ ಅ.ಪಹೆಣ್ಣು ಮಕ್ಕಳು ಬಚ್ಚಲೊಳಗೆಣ್ಣೆ ಮಂಡೆಯೊಳು |ಬಣ್ಣವಸ್ತ್ರವ ಬಿಚ್ಚಿ ಬರಿಮೈಯಲಿರುತಿರೆ ||ಕಣ್ಣಿಗೆ ಬಿಸಿನೀರ ಚೆಲ್ಲಿ ಸೀರೆಯನೊಯ್ದು |ಉನ್ನತವಾದ ವೃಕ್ಷವನೇರಿದನೆ ರಂಗ 1ಪಟ್ಟೆಮಂಚದ ಮೇಲೆ ಪತಿಯಂತೆ ಕುಳಿತಿರುವ |ಎಷ್ಟು ಸ್ವಾತಂತ್ರ್ಯವೆಗೋಪಿ||ಉಟ್ಟ ಸೀರೆಯನೆಳೆದು ಬಟ್ಟಕುಚವ ಪಿಡಿದು |ಅಷ್ಟು ಮಂದಿಗಳೊಳಗೆ ಗಟ್ಟಿ ಅಪ್ಪಿಕೊಂಡನೆ 2ಸಡಗರದಿಂದ ಗೋವಳಿತಿಯರೊಡಗೂಡಿ |ನುಡಿಸುತ ಕೊಳಲನು ಪುರದೊಳಗೆ ||ಕಡೆವ ಮಡದಿಯರ ಕೈ ಪಿಡಿದಾಡುವ |ಒಡೆಯನೆ ನಮ್ಮ ಶ್ರೀಪುರಂದರವಿಠಲ 3
--------------
ಪುರಂದರದಾಸರು
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು