ಒಟ್ಟು 365 ಕಡೆಗಳಲ್ಲಿ , 78 ದಾಸರು , 333 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯ ನೆನೆಯದ - ನರಜನ್ಮವೇಕೆ ? ಶ್ರೀಹರಿಯ ಕೊಂಡಾಡದ ನಾಲಿಗೆಯಿನ್ನೇಕೆ ಪ.ಸತ್ಯ - ಶೌಚವಿಲ್ಲದ ಆಚಾರವೇಕೆ ?ಚಿತ್ತ ಶುದ್ಧಿಯಿಲ್ಲದ ಜ್ಞಾನವೇಕೆ ?ಭಕ್ತಿ - ಭಾನವಿಲ್ಲದ ದೇವಪೂಜೆ ಏಕೆ ?ಉತ್ತಮರಿಲ್ಲದ ಸಭೆಯು ಇನ್ನೇಕೆ ? 1ಕ್ರೋಧವ ಬಿಡದಿಹ ಸಂನ್ಯಾಸವೇಕೆ ?ಆದರವಿಲ್ಲದ ಅಮೃತಾನ್ನವೇಕೆ ?||ವೇದ - ಶಾಸ್ತ್ರವಿಲ್ಲದ ವಿಪ್ರತನವೇಕೆಕಾದಲಂಜುವನಿಗೆ ಕ್ಷಾತ್ರ ತಾನೇಕೆ ? 2ಸಾಲದಟ್ಟುಳಿಯೆಂಬ ಸಂಸಾರವೇಕೆ ?ಬಾಲಕರಿಲ್ಲದ ಭಾಗ್ಯವಿನ್ನೇಕೆ ?ವೇಳೆಗೆ ಒದಗದ ನೆಂಟರಿನ್ನೇಕೆ ? ಅನುಕೂಲವಿಲ್ಲದ - ಸತಿಯ ಸಂಗವೇಕೆ 3ಮಾತೆ - ಪಿತರ ತೊರೆದ ಮಕ್ಕಳಿನ್ನೇಕೆ ?ಮಾತು ಕೇಳದ ಮಗನಗೊಡವೆ ಇನ್ನೇಕೆ ||ನೀತಿ ತಪ್ಪಿದ ದೊರೆಯ ಸೇವೆ ಇನ್ನೇಕೆ ? ಅನಾಥನಾಗಿರುವಗೆ ಕೋಪವಿನ್ನೇಕೆ ? 4ಅಳಿದುಳಿದಿಹ ಮಕ್ಕಳುಗಳಿನ್ನೇಕೆ ?ತಿಳಿದು ಬುಧ್ಧಿಯ ಹೇಳಿದ ಗುರುತನವೇಕೆ ?ನಳಿನನಾಭ ಶ್ರೀ ಪುರಂದರವಿಠಲನಚೆಲುವ ಮೂರುತಿಯ ಕಾಣದ ಕಂಗಳೇಕೆ 5
--------------
ಪುರಂದರದಾಸರು
ಹರಿಯಧಿಕ ಹರನಧಿಕ ಎಂದು ಹೋರಾಡದಿರಿ |ಹರಿಹರರ ಭಕ್ತರೇ ಸಾಕ್ಷಿ ಲೋಕದೊಳು ಪ.ಹರಿಯೆಂದು ಪ್ರಹ್ಲಾದ ಬಂದ ದುರಿತವ ಗೆಲಿದ |ಹರನೆಂದು ಅವನ ಪಿತ ತಾನೆ ಅಳಿದ ||ಹರಿಯೆಂದ ವಿಭೀಷಣನು ಸ್ಥಿರಪಟ್ಟವೈದಿದ |ಹರನೆಂದ ರಾವಣನು ಹತನಾದನಯ್ಯ 1ಹರಿಯೆಂದು ಭೀಮ ಪರಿಪೂರ್ಣಕಾಮನು ಆದ |ಹರನೆಂದ ಆ ಜರಾಸಂಧ ಹತನಾದ ||ಹರಿಯು ಬಾಗಿಲ ಕಾಯ್ದ ಬಲ ಭಾಗ್ಯವಂತನಾದ |ಹರನು ಬಾಗಿಲ ಕಾಯ್ದ ಬಾಣನಳಿದ 2ಹರನ ವರವನು ಪಡೆದ ಭಸ್ಮಾಸುರನು ಅವನ |ಶಿರದಲ್ಲಿ ತನ್ನ ಕರವಿಡಲು ಬರಲು ||ಹರಿ ನೀನೆ ಗತಿಯೆಂದು ತ್ರಿಪುರಾರಿ ಮೊರೆಯಿಡಲು |ವರದ ಪುರಂದರವಿಠಲ ಕಾಯ್ದುದರಿಯ ? 3
--------------
ಪುರಂದರದಾಸರು
ಹಿಂದಿನ ಬವಣೆಗಳೆಲ್ಲ ಆಗಲೆ ಮರೆದೆಯೇನೊ |ಇಂದುಬಂದ ಭಾಗ್ಯವು ನಿಜವೆ ವೆಂಕಟತಂದೆ?ಪತಲೆಗೆ ಹುಲಗಲ ಹೂವಕಟ್ಟಿತುರುಗಳ ಕಾಯುತಲಿದ್ದೆ |ಹಲವು ರತ್ನದ ಮುಕುಟ ಈಗ ಇಟ್ಟಿಹೆನೆಂದು 1ಒಪ್ಪಿಡಿಅವಲಕ್ಕಿಯನು ಒಪ್ಪದಿಂದ ಸವಿದೇ ಸವಿದೆ |ತಪ್ಪದೆ ಪಂಚಾಮೃತ ಉಂಡು ಸೊಕ್ಕಿದೆನೆಂದು 2ಭಾಗ್ಯವು ಬಂದರೆ ಭಕ್ತರನು ಮರೆವರೆ ಸೌ-|ಭಾಗ್ಯವಂತ ನೀನುಪುರಂದರವಿಠಲ3
--------------
ಪುರಂದರದಾಸರು