ಹಣ್ಣ ಸವಿಯ ಬಾರದೇ ಪ
ಹಣ್ಣನ್ನು ತಿಂದರೆ ಕೇಶವನೊಲಿಯುವಾ
ಚನ್ನಕೇಶವ ಸ್ವಾಮಿ ಬಿಡದೆ ಪಾಲಿಸುವಾ ಅ.ಪ.
ಪ್ರೀತಿಯೆನ್ನುವಂಥ ಬೀಜವನ್ನೇ ಬಿತ್ತಿ
ಭೂತ ದಯೆಯೆಂಬುವ ವೃಕ್ಷವ ಬೆಳೆಸೀ
ಆತುರದಲ್ಲಿ ಪರೋಪಕಾರವೆಂಬ
ನೀತಿಯ ನೀರನ್ನು ನೇಮದೊಳೆರೆದೂ 1
ಅನುದಿನ ದಾನಧರ್ಮಗಳ ಟೊಂಗೆಗಳೇರಿ
ತನುಮನ ಧನದಿಂದ ದೈನ್ಯರ ಸಲಹಿ
ಘನತರ ಸ್ವಾರ್ಥ ತ್ಯಾಗವುಯೆಂಬ ಪರ್ಣವ
ನೆನೆದು ಕೃತಜ್ಞತೆ ಕುಸುಮವ ಪಡೆದೂ 2
ವರತರ ದೇವಾಂಶ ಗುಣದಿಂದ ಬೆಳೆದಿರ್ಪ
ಹರಿಭಕ್ತಿಯೆನ್ನುವ ಫಲವನ್ನೇ ಕೊಯ್ದು
ಸರಸದಿ ಕೀರ್ತನೆ ಭಜನೆ ಸೂತ್ರಗಳಿಂದ
ಪರಮ ಭಕ್ತೀಯೆಂಬ ಹಣ್ಣನು ತಿಂದೂ 3
ಧರೆಯಲ್ಲಿ ಸಿಗುವಂಥ ಹಣ್ಣನು ಸವಿದರೆ
ನಿರುತ ತೃಪ್ತಿಯು ಆಗಲಾರದು ದೇವಾ
ಅಮೃತ ಹರುಷದಿ ತಿನ್ನಲು ಘನಮುಕ್ತಿ ದಿಟವು 4