ಚರಣವ ನರ್ಚಿಸುವೆ ಹರಿ ನಿನ್ನ ಮರೆಯದೆ ಕೀರ್ತಿಸುವೆ
ನೀನೆ ಎನ್ನರಸ ರಕ್ಷಿಸು ಎಂದು ಪ
ರಕ್ಷಿಸು ಎಂದು 1
ಸುಗುಣಂಬರೀಶ ಭೂಪಗೆ ಕೊಡಲಾಕ್ಷಣ
ಗಮನ ಚನ್ನಿಗನೆ ರಕ್ಷಿಸು ಎಂದು 2
ಮುಳಿದು ಗಜವ ನೆಗಳೆಳೆಯಲು ಭಯದಲಿ
ನಳಿನಾಕ್ಷ ನಿನಗೆ ದೂರಲು ಬೇಗದಲಿ ಸಾರಿ
ಸುಲಲಿತ ಮಹಿಮನೆಗಳ ಸೀಳಿ ಕರಿಯನು
ಸಲಹಿದೆ ದೇವ ಗೋವಳನೆ ರಕ್ಷಿಸು ಎಂದು 3
ಬೇಗದಲಿ ಕಂಬದಿಬಂದು
ಸದೆದು ದಾನವನ ದಾಯದಲಿ ಕಾಯ್ದು
ಪದುಮಾಕ್ಷ ನರಹರಿ ಮುದದಿ ರಕ್ಷಿಸು ಎಂದು 4
ದುರುಳ ದುಶ್ಯಾಸನ ಭೂವರ ಪಾಂಡು ತನುಜರ
ಅರಸಿಯ ಸೀರೆಯ ಭರದಿ ಸೆಳೆಯಲಾಗ
ಮೊರೆಯಿಡಲಕ್ಷಯ ವರವನಿತ್ತು ಸಲಹಿದ
ಹರಿ ಸುತ ಕೋಣೆಯ ಲಕ್ಷ್ಮೀಶ ರಕ್ಷಿಸು ಎಂದು 5