ದೃಷ್ಟಿ ಇರಬೇಕಯ್ಯ ಬ್ರಹ್ಮದಿ ದೃಷ್ಟಿಯಿರಬೇಕುದೃಷ್ಟಿಯಿಲ್ಲದಿರಲು ಅನುಭವ ಪಟು ದೊರಕದು ಪ
ಆಲಿಯು ನಿಂತೆ ಆಲಿಯ ಗೊಂಬೆಯು ತಿರುಗದಲಿರಬೇಕುಆಲಿಯು ಮುಚ್ಚದೆ ಆಲಿಯ ರೆಪ್ಪೆಯು ಬಡಿಯದಲಿರಬೇಕು 1
ಅನಿಮಿಷ ದೃಷ್ಟಿಯಂದದಿ ಬ್ರಹ್ಮವ ಆಲಿಸುತಿರಬೇಕುಅನಿಮಿಷದಂದದಿ ಕಣ್ಣಿನ ಗುಡ್ಡೆ ತಿರುಗದಲಿರಬೇಕು2
ದೃಷ್ಟಿಯು ಕುಳಿತಾ ದೃಷ್ಟಿಯು ಮುಂದಕೆ ಸಾಗಲಿರಬೇಕುದೃಷ್ಟಿಯು ತಾನೆಡಬಲಕೆ ಸರಿಯದೆ ದೃಷ್ಟಿಯು ಇರಬೇಕು 3
ಕುಳಿತಾ ಸ್ಥಳವು ತಪ್ಪಲು ಮತ್ತೆಯು ಕುಳಿತುಕೊಳ್ಳಬೇಕುಥಳಥಳ ಹೊಳೆಯುವ ಬೆಳಗದ ಪಸರಿಸಿ ತರನಾಗಿರಬೇಕು 4
ಉದಯಾಸ್ತಮಾನವು ದಿವರಾತ್ರಿಯುಡುಗಿ ಇರಬೇಕುಚಿದಾನಂದ ಸದ್ಗುರು ತಾನಾಗಿಯೆ ತಾನೆ ಇರಬೇಕು 5