ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ
ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1
ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2
ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3
ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4
ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5