ಆರತಿಯೆತ್ತಿದರೆ ಕೇಶವ ನಾರಾಯಣಗೆ ಪ.
ಶಾಶ್ವತವೀವ ಮಾಧವ
ವಾಸವವಂದ್ಯ ಗೋವಿಂದಗಾರತಿಯನೆತ್ತಿದರೆ ಅ.ಪ.
ದ್ವಾಪರ ರಹಿತ ಶ್ರೀವಿಷ್ಣುವಿಗೆ ಅಪಾರ ಮಧುಸೂದನಗೆ
ಪಾಪರಹಿತ ತ್ರಿವಿಕ್ರಮಗಾರತಿಯನೆತ್ತಿದರೆ1
ಸಾಧುಸೇವಿತ ವಾಮನಗೆ ಶ್ರೀಧರ ಹೃಷೀಕೇಶನಿಗೆ
ಆದಿಮೂರುತಿ ಪದ್ಮನಾಭಗಾರತಿಯನೆತ್ತಿದರೆ 2
ದÁಮೋದರ ವಾಲುಳ್ಳವಗೆ(?) ಪ್ರೇಮದಿ ಸಂಕರ್ಷಣಗೆ
ಕಾಮಿತಾರ್ಥವನೀವ ವಾಸುದೇವಗಾರತಿಯನೆತ್ತಿದರೆ 3
ಅನಿರುದ್ಧ ಪುರುಷೋತ್ತಮಗೆ
ವಿನಯದಿಂದಲಿ ಅಧೋಕ್ಷಜಗಾರತಿಯನೆತ್ತಿದರೆ 4
ನರಸಿಂಹರೂಪನಾದವಗೆ ವರದ ಮೂರುತಿ ಅಚ್ಯುತಗೆ
ಅರಿಭಯಂಕರ ಜನಾರ್ದನಗಾರತಿಯನೆತ್ತಿದರೆ 5
ಉಪೇಂದ್ರನೆಂದೆನಿಸಿಕೊಂಡವಗೆ ಅಪಾರಮಹಿಮ ಶ್ರೀಹರಿಗೆ
ಗೋಪಾಲಮೂರುತಿ ಶ್ರೀಕೃಷ್ಣಗಾರತಿಯನೆತ್ತಿದರೆ 6
ಚತುರವಿಂಶತಿಮೂರುತಿಗಳಾ ಅತಿಶಯ ಧವಳವ ಪಾಡೆ
ಸಿರಿ ಹಯವದನ 7