ಪಥವ ಬಿಡು ಬಿಡು ದೇವ ಪಥದಿ ಮಲಗುವರೆಗತಿ ಚಿದಾನಂದನಿರೆ ಗತಿಗೆಡುವೆನೆ ಭಯಕೆ ಪ
ಭವ ಹರಿದುನಿಲ್ಲದಲೆ ನಾನೀಗಲೈ ತರಲಿಕೆಇಲ್ಲಿ ಸರ್ವವೆ ಆಗಿ ನೀ ಬಂದು ಮಲಗಿರುವೆಸುಳ್ಳನಿತು ಸೇರದಿದು ನಿನ್ನವಗೆ ಬಿಡು ಪಥವ1
ಮನುಜ ಸಂಗವನಳಿದು ಮಹದರಣ್ಯವ ಹೊಕ್ಕುಅನಂತರದ ಪುಣ್ಯದಾಶ್ರಮವ ನೋಡಿಸನುಮತದಿ ಪೂಜೆಯನು ಮಾಳ್ಪೆನಾನೆಂದು ಬರೆಘನಸರ್ಪವಾಗಿ ನೀನಡ್ಡ ಬಿದ್ದಿಹೆ ದೇವ 2
ಸಕಲ ಸಂಗವನುಳಿದು ಸ್ವಾನುಭಾವಗಳಿಂದಅಖಿಲ ಮೃಗಗಳ ಕೂಡಿ ನಿಶ್ಚಲತೆಯಿಂದಭಕುತಿಯಲಿ ನಿನ್ನನು ಭಜಿಪೆನೆಂದೈದುತಿರೆಭಕುತನಿಗೆ ಸರ್ಪನಂತಿಹುದಿದೇನೈ ಸ್ವಾಮಿ3
ಏಕಾಂತ ಗೃಹಗಳಲಿ ಏಕಾಂತ ಸ್ಥಳಗಳಲಿಏಕಾಂತವಾಗಿ ನಿನ್ನನೆ ಪೂಜಿಸಿಏಕಾಂತ ಸರ್ವಸಾಧನವೆನುತಲೈದುತಿರೆಏಕಾಂತ ಮಾತೇಕೆ ಪಥವ ಬಿಡು ಎಲೆ ದೇವ 4
ಶುಕಗೆ ಪಂಜರದಂತೆ ಸಾಕ್ಷಿಯೆನಗಿರುತಿರಲುಅಖಿಲ ಚಿಂತೆಯ ಗಿಡುಗ ಬರಲಹುದೆಮುಕುತಿದಾಯಕ ಚಿದಾನಂದ ಗುರು ಕೇಳೆನಗೆಯುಕುತಿಯುಂಟೇ ಬೇರೆ ಬಿಡುಬಿಡಿರೆ ಬಿಡು ಪಥವ5