ಹಿಮಾಚಲೇಂದ್ರನ ಕುಮಾರಿ ಶಂಕರಿ
ಉಮಾಂಬೆ ಬಾರಮ್ಮ ಪ
ಕುಮಾರ ಶಕ್ರಾದಿ ಸಮಸ್ತ ಸುರಗಣ
ಸಮರ್ಚಿತಾಂಘ್ರಿಯೆ ನಮೋನಮೋ ಎಂಬೆ ಅ.ಪ.
ಬುದ್ಧ್ಯಾಭಿಮಾನಿಯೆ ಸದ್ಯೋಜಾತನ ರಾಣಿ
ಹೃದ್ಧ್ಯೋಮದಲಿ ಪೊಳೆದು
ವಿದ್ಯಾ ಬುದ್ಧಿಯನಿತ್ತು ಶುದ್ಧಾತ್ಮನನು ಮಾಡಿ
ಸದ್ಭಕ್ತಿ ಪಂಥದ ಸಿದ್ಧಾಂತ ತಿಳಿಸಮ್ಮ 1
ಘೋರ ಭವಾಬ್ಧಿಯ ತಾರಿಪ ಸುಲಭದ
ದಾರಿಯ ತೋರೆನುತ
ಮುರಾರಿಯನು ಬೇಡಿ ಶ್ರೀ ರಾಮ ನಾಮದ
ರುಚಿ ಬೀರಿದೆ ಜಗದೊಳು 2
ಲಕ್ಷಾಘ ಧ್ವಂಸಿನಿ ದಾಕ್ಷಾಯಿಣೀ ಗಣಾ
ಧಕ್ಷನ ವರ ಜನನಿ
ಲಕ್ಷ್ಮೀಕಾಂತನ ಅಪರೋಕ್ಷದಿ ಕಾಂಬುವ
ಸೂಕ್ಷ್ಮವನೊರೆದೆನ್ನ ರಕ್ಷಿಸು ಅಮ್ಮಯ್ಯ 3