ಕಾಯ ಪ
ಗತಿ ನೀನೆ ಎನಗೆ ಸಂತತ ಪರಂಧಾಮಾ ಅ
ಕೃಪಣ ವತ್ಸಲನೆ ಎಮ್ಮಪರಾಧಗಳ ನೋಡಿ
ಕುಪಿತನಾಗುವರೇನೋ ಸುಫಲದಾಯೀ
ನೃಪಗನಿರುದ್ಧ ಬಿನ್ನಪವ ಮಾಡುವೆ ನಿನಗೆ
ಚಪಲ ಚಿತ್ತರಾದ ಕಾಶ್ಯಪಿಸುರರನ ಕಾಯೋ 1
ಮಾನ್ಯಮಾನದನೆ ಬ್ರಹ್ಮಣ್ಯದೇವ ನೀನೆಂದು
ಉನ್ನತ ಶ್ರುತಿಗಳು ಬಣ್ಣಿಸುವುವು
ಸನ್ನುತ ಮಹಿಮನೆ ನಿನ್ನ ಪೊಂದಿದವರ
ಬನ್ನ ಬಡಿಸುವುದು ನಿನಗಿನ್ನು ಧರ್ಮವು ಅಲ್ಲ 2
ಹಲವು ಮಾತುಗಳಾಡಿ ಫಲವೇನು ಬ್ರಾಹ್ಮಣರ
ಕುಲಕೆ ಮಂಗಳವೀಯೋ ಕಲುಷದೂರ
ಸುಲಭ ದೇವೇಶ ನಿನ್ನುಳಿದು ಕಾವರ ಕಾಣೆ
ಬಲಿಯ ಬಾಗಿಲ ಕಾಯ್ದ ಜಗನ್ನಾಥ ವಿಠಲಾ 3