ಅಸುರ ಪ್ರಕೃತಿಯ ದೈವ ಪ್ರಕೃತಿಯನೆರಡನು ನೀನೀಗ ಕೇಳುಅಸುರ ಪ್ರಕೃತಿಯಲಿ ಜನ್ಮವು ದೈವ ಪ್ರಕೃತಿಯಲಿ ಮುಕ್ತಿಯೆ ಎಂಬೆನು ಪ
ಕೃತ್ರಿಮ ಕಾಮವು ಮದಮತ್ಸರವು ತಾನಿವು ಅಸುರ ಪ್ರಕೃತಿಸತ್ಯವು ಶಾಂತವು ಶಮದಮವೆಂಬಿವು ತಾನಿವು ದೈವ ಪ್ರಕೃತಿ 1
ಬದ್ಧ ಅವಿದ್ಯೆಯು ಭ್ರಾಂತಿಯು ನಾಶವು ತಾನಿವು ಅಸುರ ಪ್ರಕೃತಿಶ್ರದ್ಧೆಯು ಸೌಮ್ಯವು ಸಂತಸ ಸಾಕ್ಷಿಯು ತಾನಿವು ದೈವ ಪ್ರಕೃತಿ 2
ಕಪಟವು ಕಲ್ಮಷ ಕೃತ್ರಿಮ ಸಂಶಯ ತಾನಿವು ಅಸುರ ಪ್ರಕೃತಿಅಪರೋಕ್ಷಾನುಭವ ಆತ್ಮ ವಿಚಾರವು ತಾನಿವು ದೈವ ಪ್ರಕೃತಿ 3
ದುಃಖ ದುರ್ಬೀಜವು ಕ್ರೂರ ದೃಷ್ಟಿಯು ತಾನಿವು ಅಸುರ ಪ್ರಕೃತಿಸುಖ ಆನಂದವು ಅಂತರ ದೃಷ್ಟಿಯು ತಾನಿವು ದೈವ ಪ್ರಕೃತಿ 4
ಮರಣ ಜನನಕೆ ಅಜ್ಞಾನ ಕಾರಣ ತಾನಿದು ಅಸುರ ಪ್ರಕೃತಿಅರಿತು ತನ್ನನು ಚಿದಾನಂದನಾಗುವುದು ತಾನಿದು ದೈವ ಪ್ರಕೃತಿ 5