ಚರಣದಾಸರ ಸದುಹೃದಯ ನಿವಾಸನೆ ಸಿರಿರಾಮ
ಪರಮ ಪಾವನೆ ವರಜಾಹ್ನವೀ ಜನಕನೆ ಸಿರಿರಾಮ ಪ
ಶರಣಜನರ ಮೇಲ್ನುಡಿಯೋಳ್ಸಂಚಾರನೆ ಸಿರಿರಾಮ
ನೆರೆನಂಬಿ ಭಜಿಪರ ಭವಮಲಹರಣನೆ ಸಿರಿರಾಮ
ಕರುಣದೊದೆದು ಯುವತಿಕುಲವನುದ್ಧರಿಸದನೆ ಸಿರಿರಾಮ
ವರದ ವಾಸುಕಿಶಾಯಿ ಜಗದೇಕ ಬಂಧುವೇ ಸಿರಿರಾಮ 1
ಧುರಧೀರವಾಲಿಯ ಗರುವನಿವಾರನೆ ಸಿರಿರಾಮ
ಮರೆಬಿದ್ದ ಸುಗ್ರೀವನ ದು:ಖಪರಿಹಾರನೆ ಸಿರಿರಾಮ
ಪರಮಭಕ್ತ್ಹನುಮಗೆ ಕರವಶನಾದನೆ ಸಿರಿರಾಮ
ಶರಣುಬಂದಸುರಗೆ ಸ್ಥಿರಪಟ್ಟವಿತ್ತನೆ ಸಿರಿರಾಮ 2
ಶರಧಿಮಥನಮಾಡಿ ಸುರರ ರಕ್ಷಸಿದನೆ ಸಿರಿರಾಮ
ಹರನಕೊರಳ ಉರಿ ಕರುಣದ್ಹಾರಿಸಿದನೆ ಸಿರಿರಾಮ
ವರಗಿರಿನಂದನೆಮನ ಸೂರೆಗೈದನೆ ಸಿರಿರಾಮ
ಸರುವದೇವರದೇವ ಅದ್ಭುತಮಹಿಮನೆ ಸಿರಿರಾಮ 3
ಕರಿಯ ರಕ್ಷಣೆಗಾಗಿ ಕಾಸಾರಕ್ಕಿಳಿದನೆ ಸಿರಿರಾಮ
ತರುಣಿಮೈಗಾವಗೆ ಚರನಾಗಿ ನಿಂತನೆ ಸಿರಿರಾಮ
ಚರಣದಾಸರಮನೆ ತುರಗವ ಕಾಯ್ದನೆ ಸಿರಿರಾಮ
ಪರಮಭಾಗವತರನರೆಲವ ಬಿಟ್ಟಿರನೆ ಸಿರಿರಾಮ 4
ಅನುಪಮ ವೇದಗಳಗಣಿತಕ್ಕೆ ಮೀರಿದನೆ ಸಿರಿರಾಮ
ಸನಕಸನಂದಾದಿ ಮನುಮುನಿ ವಿನಮಿತನೆ ಸಿರಿರಾಮ
ವನರುಹ ಬ್ರಹ್ಮಾಂಡ ಬಲುದರದಿಟ್ಟಾಳ್ವನೆ ಸಿರಿರಾಮ
ಮನಮುಟ್ಟಿ ಭಜಿಪರ ಘನಮುಕ್ತಿ ಸಾಧ್ಯನೆ ಸಿರಿರಾಮ 5