ನೆಲೆಯಗೊಳ್ಳಿರೊ ಮನವ ಬಲಿದು ನೆಲೆಯಗೊಳ್ಳಿರೊ
ನೆಲೆಯಗೊಳ್ಳಿರಯ್ಯ ನೀವು ಬಲಿದು ಭಾವಭಕ್ತಿಯಿಂದ ಧ್ರುವ
ಹಲವು ಮಾತಾಡಿ ನಿಮ್ಮ ಕುಲವ ಚಲವವೆಂದು ಎನಿಸಬ್ಯಾಡಿ
ಹೊಲಬು ತಿಳಿದು ನಿಮ್ಮ ನೆಲೆಯನಿಭವನರಿತು ನೋಡಿರೊ 1
ಗುಟ್ಟು ತಿಳಿಯಲರಿಯದೆ ಬೊಟ್ಟೆಣಿಸಿ ದಣಿಯಬ್ಯಾಡಿ
ಮಟ್ಟಮಾಡಿ ಮನವ ನಿಜಗಟ್ಟಿಗೊಳ್ಳಿರೊ 2
ನಿಲವು ತಿಳಿದು ನೆಲಯಗೊಂಡು ಇಳಿಯೊಳಗೆ ಮಹಿಪತಿಯು
ಒಲಿದು ದಯಮಾಡಿ ಸಲಹುತಿಹ ಗುರು ಕಾಣಿರೊ 3