ಒಟ್ಟು 102 ಕಡೆಗಳಲ್ಲಿ , 41 ದಾಸರು , 93 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತತಕಲ್ಯಾಣಅಚ್ಯುತಭಟರಿಗೆರತಿಪತಿಪಿತನಂಘ್ರಿರತ ಮಹಾತ್ಮರಿಗೆ ಪ.ಆಧಿ ವ್ಯಾಧಿಗಳಿಲ್ಲ ಅಶುಭವಾರ್ತೆಗಳಿಲ್ಲಕ್ರೋಧ ನೃಪಭಯವಿಲ್ಲ ಕಾಕುಮತಿ ಇಲ್ಲಖೇದಮನಕಿಲ್ಲ ಖಿನ್ನತೆಯು ಮುಖಕಿಲ್ಲಶ್ರೀಧವನ ನವ ಭಕುತಿಶೀಲ ಜೀವರಿಗೆ 1ಅರಿಗಳೆ ಸಖರಕ್ಕು ಅತಿವಿಷ ಅಮೃತವಕ್ಕುಉರಗಪೂಮಾಲೆಯಕ್ಕು ಉರಿ ತಣ್ಣಗಕ್ಕುಶರಧಿಗೋಷ್ಪದವಕ್ಕು ಶರಘಾತ ಬೆಂಡಕ್ಕುನರಹರಿಯ ನಾಮವನು ನಂಬಿ ತುತಿಪರಿಗೆ 2ಪಾಪ ತಾಪಗಳ್ಗೋಟ ಪರಿದುಬಹ ಎಡರ್ಗೋಟಆಪತ್ತುಗಳಿಗೋಟ ಆಲಸ್ಯಕೋಟಕೋಪದಾರಿದ್ರ್ರ್ಯಕೋಟ ಕಲಿವ್ಯಸನ ಮದಕೋಟಶ್ರೀ ಪ್ರಸನ್ವೆಂಕಟನ ಭಜಿಪ ಭಕ್ತರಿಗೆ 3
--------------
ಪ್ರಸನ್ನವೆಂಕಟದಾಸರು
ಸತ್ಕರ್ಮ ತ್ಯಾಗವೇ ನಿಜಬ್ರಹ್ಮವುಸತ್ಕರ್ಮ ಬ್ರಹ್ಮಕೆ ಉಪಾಧಿರೂಪವಯ್ಯಾಪಹುಟ್ಟಿಗೆ ಶಾಖಗಳರುಚಿಹತ್ತದಿದ್ದಂತೇಬಿಟ್ಟಿಹನು ಮತ್ತೆಂಬೆ ಸಂಸಾರದಿ ಹುಟ್ಟಿಗೆಯು ವಾಸನೆಯುಹತ್ತದಲೆ ಇಹುದೆ ಬಿಟ್ಟು ಕೊಡಬೇಕು ಸತ್ಕರ್ಮ ಪಥವ1ಹೂಡುವೆತ್ತುಗಳೆತ್ತ ನಡೆಪ ಘೋಡವದೆತ್ತಮಾಡ್ವ ಎರಡರಲಿ ಬಿಟ್ಟಿಹ ಯೋಗವನು ಎತ್ತಝಾಡಿಸಿಯೆ ಬಿಡಿರಿ ಸತ್ಕರ್ಮ ಪಥವ2ಎರಡುಕಡೆ ಚಿತ್ತವು ಸಮನಿಸುವುದೇತಕ್ಕೆಗುರುಗುಟ್ಟಲೇಕೆ ಉರಲಿಕ್ಕಲೇಕೆಕರೆಕರೆಯ ಸತ್ಕರ್ಮ ತ್ಯಾಗವನು ಮಾಡಿ ಬಿಡಿಗುರುಚಿದಾನಂದ ಸಹಜರಾಗುವಿರಿ ನಿಜದಿ3
--------------
ಚಿದಾನಂದ ಅವಧೂತರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು