ಏನುಧನ್ಯನೊ ಇವನು ಎಂಥ ಪುಣ್ಯನೊ
ದೀನದಯಾಳು ಜಾನಕೀಶನ ಧ್ಯಾನ ಮಾಳ್ಪ ಮಾನವನು ಪ
ಜ್ಞಾನದಿಂದ ತಿಳಿದು ಜಗ ಶೂನ್ಯವೆಂದು ಊಹಿಸಿ ಮನದಿ
ದಾನವಾಂತಕನಾದ ಹರಿಯ ಧ್ಯಾನವೊಂದೇ ಕಾರಣೆಂದು
ಜ್ಞಾನಬೆಳಗಿನೊಳಗೆ ನೋಡಿ ಆನಂದಿಸುತಲ್ಹಿಗ್ಗುವವ 1
ಆಶಪಾಶಗಳನು ನೀಗಿ ಈ ಮೋಸಮಯ ಸಂಸಾರದೊಳು
ವಾಸನಾರಹಿತನಾಗಿ ಸದಾ ದಾಸಸಂಗಸುಖಪಡೆದು
ಈಶ ಭಜನೆಯೊಳ್ಮನವಿಟ್ಟು ಈಸಿಭವಾಂಬುಧಿ ಪಾರಾಗುವವ 2
ನಂಬಿಗಿಲ್ಲದ ದೇಹವಿದನು ನಂಬಿನೆಚ್ಚಿ ಸಂಭ್ರಮಿಸದೆ
ಕಂಬುಕಂಧರ ಶಂಭುವಿನುತ
ಅಂಬುಜಾಕ್ಷ ಶ್ರೀರಾಮನ ನಂಬಿ ಗಂಭೀರಸುಖದೊಳಿರುವವ 3