ಒಂದು ಕೊಟ್ಟರೆ ಶಿವ ಮತ್ತೊಂದು ಕೊಡನಯ್ಯ
ಆನಂದ ವಸ್ತುವಿಗೊಂದು ಲೀಲೆ ಇದಯ್ಯ ಪ
ರೊಕ್ಕವಿದ್ದವರಿಗೆ ಮಕ್ಕಳೆಂಬವರಿಲ್ಲ
ಮಕ್ಕಳಿದ್ದರೆ ತಕ್ಕವನಿತೆಯಿಲ್ಲ
ಚೊಕ್ಕಸತಿಯು ಸಿಕ್ಕಿತಾನುರೂಪದೊಳಿರೆ
ಪಕ್ಕನೆ ಅಗಲಿ ಪೋಗುವರಯ್ಯ 1
ಚೆಲುವ ಹೆಣ್ಣೆಗೆ ತಕ್ಕ ಚೆಲುವ ಪುರುಷನಿಲ್ಲ
ಚೆಲುವ ನಾದವ ಗೊಳ್ಳೆಲಲನೆಯಿಲ್ಲ
ಹಲವು ಜನ್ಮದ ಪುಣ್ಯ ಫಲದಿಂದ ಸೇರಲು
ಹೊಳೆದು ಹೋಗುವರಿದರೊಳಗೊಬ್ಬರಯ್ಯ 2
ಸತಿ ಸುತರು ಇರುತಿರಲು ದಾರಿದ್ರ ತಿಂಬುವುದಕಿಲ್ಲ
ಗತಿಯಿಲ್ಲದವನಿಗೆ ನರಕವಿಲ್ಲ
ಅತಿಶಯವಾಗಿ ತಿಂಬುದಕ್ಕಿದ್ದ ನರರಿಗೆ
ಸತತ ಶಾರೀರ ಸುಖವಿಲ್ಲವಯ್ಯ 3
ಉಂಬಲೂಡಲು ಸರ್ವಸಕಲ ಸಂಪತ್ತೆಲ್ಲ
ತುಂಬಿರಲು ತನ್ನ ಗೃಹದೊಳೆಲ್ಲ
ಬೆಂಬಿಡದೆ ರೋಗವು ಪುಟ್ಟಿತನುವಿನೊಳ್
ತಿಂಬುದಕವಗೆ ಬಾಯಿಗಳಿಲ್ಲವಯ್ಯ 4
ಸಕಲ ಜೀವರಿಗು ಚಿಂತೆಗಳಿಲ್ಲದವರಿಲ್ಲ
ಸುಖವು ಸ್ವಪ್ನದೊಳು ಕಾಣುವುದಿಲ್ಲವಯ್ಯ
ಬಕನ ವೈರಿಯ ಕೋಣೆಯ ಲಕ್ಷ್ಮೀಪತಿ ಪ್ರಿಯ
ಮಕರ ಕೇತನ ವೈರಿಯಾಟವಿದಯ್ಯ 5