ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ.
ಹರಿಯೆ ಮೂಜಗದ ದೊರೆಯೆ ನಿನ್ನನೆ
ಮರೆಯಪೊಕ್ಕವರಲ್ಲಿ ಈ ಪರಿ
ಬರಿಯ ಪಂಥದಿ ಮರುಗದಿರ್ಪುದು
ಸರಿಯೆ ನಿನಗದು ಸರಸವಲ್ಲದುಅ.ಪ.
ಉಕ್ಕಿನ ಕಂಬದಿಂದ ಉದಿಸಿ ಬಂದು
ರಕ್ಕಸನುರವ ಸೀಳಿ ಕರುಳನು ಬಗೆದು
ಉಕ್ಕುವ ಕೋಪದಿಂದ ರಕುತವು ಸುರಿಯೆ
ಭಕ್ತ ಪ್ರಹ್ಲಾದನಾದರದಿ ಕಾಯ್ದು
ಭಕ್ತ ವತ್ಸಲನೆನಿಸಲಹುದು
ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1
ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ
ವಿಪ್ರನ ನಲವಿಂದ ನೋಡುತಲಂತು
ವಿಪುಲಸಂಪದವನ್ನು ಕರುಣಿಸಿದಂಥ
ಅಪ್ರತಿಮ ಸಾಹಸಿಯೆನುತೆ ನಿನ್ನೊಳು
ತಪಿಸಿ ಬೇಡುವ ಎನ್ನೊಳೀಪರಿ
ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2
ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ
ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ
ಸಾನುರಾಗದಿಂ ಗಜನಂ ಉದ್ಧರಿಸಿದೆ
ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ
ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ
[ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3