ಆವ ರೀತಿಯಿಂದ ನೀಯೆನ್ನ ಪಾಲಿಸೊಶ್ರೀವಿಭು ಹಯವದನ ಪ.
ಈ ವಿಧ ಭವದೊಳು ಇಷ್ಟು ಬವಣೆಪಟ್ಟೆತಾವರೆದಳನಯನ ಹಯವದನಅ.ಪ.
ಕಾಮನ ಬಾಧೆಯ ತಡೆಯಲಾರದೆ ಕಂಡಕಾಮಿನಿಯರನೆ ಕೂಡಿನೇಮನಿಷ್ಠೆಯಿಂದ ನಿನ್ನನು ಭಜಿಸದೆಪಾಮರನಾದೆನೊ ಹಯವದನ 1
ಅಂಗನೆಯರಲ್ಲಿ ಅಧಿಕ ಮೋಹದಿಂದಶೃಂಗಾರಗಳನೆ ಮಾಡಿಮಂಗಳಾಂಗನೆ ನಿನ್ನ ಮಹಿಮೆಯ ಪೊಗಳದೆಭಂಗಕ್ಕೆ ಒಳಗಾದೆನೊ ಹಯವದನ 2
ಹೀನ ಸಂಗವನೆಲ್ಲ ಹಯಮುಖದೇ-ವನೆ ವರ್ಜಿಸುವಂತೆ ಮಾಡೊಜ್ಞಾನಿಗಳರಸನೆ ದಯವಿಟ್ಟು ನಿನ್ನನುಧ್ಯಾನಿಸುವಂತೆ ಮಾಡೊ ಹಯವದನ 3