ಏನು ಕರ್ಮವ ಮಾಡಿ ನಾ ನಿನ್ನ ಒಲಿಸಲಿ ಶ್ರೀನಿವಾಸ
ಧ್ಯಾನಕೆ ನಿಲುಕದ ಜ್ಞಾನಿಗಳರಸ ನೀನು ಶ್ರೀನಿವಾಸ ಪ
ಗಂಗೆಯ ತಂದು ಮಂಗಳಸ್ನಾನ ಮಾಡಿಸೆ ಶ್ರೀನಿವಾಸ
ಗಂಗೆಯು ನಿನ್ನಂಗುಷ್ಟದಲ್ಲಿಹಳಲ್ಲೊ ಶ್ರೀನಿವಾಸ 1
ಮನಮೆಚ್ಚುವಂತೆ ನಿನ್ನ ಸುಮಗಳಿಂದರ್ಚಿಪೆನೆ ಶ್ರೀನಿವಾಸ
ವನಜ ಪುಷÀ್ಪವು ನಿನ್ನ ನಾಭಿಯೊಳಿಹುದಲ್ಲೋ ಶ್ರೀನಿವಾಸ 2
ಅಂಗಿವಸ್ತ್ರಗಳಿಂದ ಶೃಂಗರಿಸುವೆನೆಂದರೆ ಶ್ರೀನಿವಾಸ
ಅಂಗನೆ ಲಕುಮಿ ಸಕಲಾಭರಣಂಗಳಾಗಿರುವಳಲ್ಲೊ ಶ್ರೀನಿವಾಸ 3
ಅನ್ನ ಪಾನಗಳಿತ್ತು ಧನ್ಯನಾಗುವೆನೆ ಶ್ರೀನಿವಾಸ
ಅನ್ನಪೂರ್ಣಿ ಷಡುರಸದನ್ನವ ಮಾಳ್ಪಳಲ್ಲೊ ಶ್ರೀನಿವಾಸ 4
ಕಡುಭಕ್ತಿಯಿಂದ ನಿನ್ನಡಿ ಸೇವೆ ಮಾಳ್ಪೆನೆ ಶ್ರೀನಿವಾಸ
ಎಡಬಿಡÀದೆ ಹನುಮ ನಿನ್ನಡಿಯ ಪಿಡಿದಿಹನಲ್ಲೊ ಶ್ರೀನಿವಾಸ 5
ಜಗದುದರ ನಿನ್ನ ಬಗೆ ಬಗೆ ನಾಮಗಳ ಸ್ತುತಿಸೆ ಶ್ರೀನಿವಾಸ
ಅಗಣಿತವಾಗಿಹುದು ಮುಗಿಯದಂತಿಹುದಲ್ಲೊ ಶ್ರೀನಿವಾಸ6
ಶ್ರಿಷ್ಟಿಕರ್ತ ಶ್ರೀ ರಂಗೇಶವಿಠಲನೆ ಎಂಬೆ ಶ್ರೀನಿವಾಸ
ಇಷ್ಟೆಂದ ಮಾತ್ರಕೆ ಒಲಿದಿಷ್ಟವ ಸಲಿಸೈಯ್ಯಾ ಶ್ರೀನಿವಾಸ 7