ಕರುಣೆ ತೋರಿಸೊ ದೇವಾ ಕರಿವರದನೆ ಪ.
ಕರುಣ ತೋರಿಸೊ ದೇವ ಗರುಡಗಮನ ನಿನ್ನ
ಕಮಲ ಧ್ಯಾನ ನಿರುತ ನೆನೆವ ಹರಿಅ.ಪ.
ವೇದಾಂತ ವೇದ್ಯ ನೀನೆ ಆದಿನಾರಾಯಣ
ಸಾಧುವಂದಿತನು ನೀನೆ ದೇವೇಶನೆ
ವೇದವ್ಯಾಸನು ನೀನೆ ಬಾದರಾಯಣ ನೀನೆ
ಭವ ಭಯಹರ ನೀನೆ 1
ಚಿಂತೆ ಕೊಡುವ ನೀನೆ ಚಿಂತಿತಾರ್ಥನು ನೀನೆ
ಅಂತಕ ದೂತರಿಂದೆಳೆಸುವ ನೀನೆ ಸರ್ವ
ಅಂತರ್ಯಾಮಿ ಅಂತÀರಂಗದಿ ನಿಂತು ಪ್ರೇರಿಸಿ ನಿನ ಪಾದ
ಪಂಥದಿ ಸ್ತುತಿಗೊಂಡು ಸಂತಸ ಪಡುವವ ನೀನೆ2
ಮಾನುನಿ ದ್ರೌಪದಿಯಾ ಮೊರೆಯ ಕೇಳಕ್ಷಯ
ನೀನೆ ಪಾಲಿಸಲಿಲ್ಲವೆ ಶ್ರೀ ಕೃಷ್ಣ
ನೀನಿತ್ತು ಸಲಹಿದ ಶ್ರೀ ಶ್ರೀನಿವಾಸ ದೊರೆ
ಗಾನಲೋಲನೆ ಭಕ್ತರ ಸಲಹುವೆನೆಂಬುವ
ಆಭಯ ಹಸ್ತವ ನೀನಿತ್ತು ಸಲಹೆನ್ನದೇವಾಧಿದೇವ 3