ಬರಿದೆ ಮೋಹದೊಳು ಬೆರೆದೆ ನಮ್ಮ
ಗುರುವಾದಿರಾಜಾರ್ಯ ಚರಣಗಳ ಮರೆದೆ ಪ.
ಸರ್ವಜ್ಞಗುರುಮತವ ನಿರ್ವಹಿಸಿ ಮಾಯಿಗಳ
ಗಣಪತಿಶಕ್ತಿ ಪೂರ್ವದೇವತೆಗಳನು
ಸರ್ವ ಪರರೆಂದೊರೆವ ದುರ್ವಾದಿಗಳ ಭಂಗಿಸಿ ಹಯವದನ-
ಪರ ದೈವವೆನಿಸಿ ಮೆರೆವಂಥ
ಪಾರ್ವತೀವರವಂದ್ಯಪದ ಪಾತ್ರನೆನಿಸದೆ 1
ಅಂತರ್ಬಹಿಃಶತ್ರು ಸಂತತಿಯ ಗೆಲುವ
ತೋರಿಸುವ ಚಂತಿತಾಭೀಷ್ಟಗಳ
ಪರಮಾಂತರಂಗದಿ ಕೊಡುವ
ಕಂತುಕೃತ ಬಾಧೆಯನ್ನು ನಿಲದಂತೆ ಸಂತೈಸಿಸುವರನ್ನು ಕಾವ ಕ-
ಲ್ಪಾಂತದಲಿ ಪವಮಾನನಾಗುವನ ಮರೆದೆ 2
ಮೂರಾರು ಎಂಬತ್ತು ಭಾರಿ ಕಲ್ಪಗಳಲ್ಲಿ ಶ್ರೀ ರಮಾರಮಣಪದ
ವಾರಿಜಗಳನು ಭಜಿಸಿ ತೋರಿ ವೈಷ್ಣವ ತತ್ವ ಸಾರವನು ಸಮಧರಿಸಿ
ಮಾರುತನ ಮತವೆ ಮಧುವೈರಿಪ್ರಿಯಕರವೆನಿಸಿ ಧೀರ ಕವಿ
ಶುಭಕರವಜ್ಞಾನ ಸುಖ
ಸಾರ ವೆಂಕಟಪತಿಯ ಮನದಿ ಧರಿಸಿರುವ 3