ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಳಿರೆ ಭಳಿರೆ ನರಸಿಂಹ ಮಹಾಸಿಂಹ | ವೈರಿ ಉರಿಮಾರಿ ಪ ನಗನಗಾ ನಗನಗಗಳಲ್ಲಾಡೆ ಚತುರ್ದಶ | ಜಗಜಗ ಜಗವೆಲ್ಲ ಕಂಪಿಸಿ ಕಂಬನಾಗೆ || ಹಗೆ ಹಗೆ ಬಲವ ದೆಶೆಗೆಡಿಸಿ ರೋಷಗಿಡಿ | ಉಗು ಉಗು ಉಗುಳುತ್ತ ಬಂದ ನರಸಿಂಹ 1 ಬಿಗಿ ಬಿಗಿ ಬಿಗಿದು ಹುಬ್ಬುಗಂಟನೆ ಹಾಕಿ | ಹೊಗೆ ಹೊಗೆ ಹೊಗೆ ಸುತ್ತಿ ಸರ್ವರಂಜೆ || ನೆಗ ನೆಗ ನೆಗ ನೆಗದು ಕುಪ್ಪಳಿಸಿ ಅಸುರನ್ನ | ಮಗು ಮಗು ಮಗು ಮಗು ಬೇಡಿಕೊಂಡ ನರಸಿಂಹಾ 2 ಉಗು ಉಗು ಉಗು ಉಗರಿಂದ ಕ್ರೂರನ್ನ ಹೇರೊಡಲ | ಬಗ ಬಗ ಬಗ ಬಗದು ರಕುತವನ್ನು | ಉಗಿ ಉಗೀ ಉಗೀ ಉಗಿದು ಚಲ್ಲಿ ಕೊರಳಿಗೆ ಕರುಳ | ತೆಗೆ ತೆಗೆ ತೆಗೆ ತೆಗೆದು ಇಟ್ಟ ನರಸಿಂಹಾ 3 ಯುಗ ಯುಗ ಯುಗ ಯುಗದೊಳಗೆ ಪ್ರಣತಾರ್ತಿ ಹರನೆಂದು | ಝಗ ಝಗಾ ಝಗಝಗಿಪ ಮಕುಟ ತೂಗೆ | ಸುರರು ಗಗನದಿ ನೆರೆದು | ಮಿಗಿ ಮಿಗಿ ಮಿಗಿ ಮಿಗಿಲೆನೆ ನರಸಿಂಹಾ 4 ಒಂದೊಂದೊಂದೊಂದು ಮುನಿಗಳಿಗೊಲಿದು | ಅಂದಂದಂದಂದದೀಗಾಯತ ವೊಲಿದು | ಅಂದಂದಂದವ ಕಾವ ಚೊಳಂಗಿರಿ | ಮಂದಿರನೆ ವಿಜಯವಿಠ್ಠಲ ನರಸಿಂಹಾ 5
--------------
ವಿಜಯದಾಸ