ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಕರುಣಾಳು ಅಂಬುದಛಾಯ ಬಿನ್ನಹ ಕೇಳು ತಾಯೊಳು ಶಿಶು ಗುಡಪಾಯಸಗೋಸುಗ ಬಾಯತೋರ್ಪುದು ನ್ಯಾಯವೇ ಪೇಳು ಪ. ಭೂತಿದೇವಿಯ ರಮಣಾ ನೃಪ ಸಂಪ್ರೀತಿ ಪೂರ್ತಿ ಕರಣಾ ಚಾತೂರ್ಯ ಕರಣಾ ದಿವಿಜಾರಾತಿ ಶಿರೋಹರಣಾ ಮಾತು ಮಾತಿಗೆ ವಿಖ್ಯಾತಿಗೊಳಿಪ ತೆರ ನೀ ತಿಳಿಯೇಯ ಖಗಕೇತನ ಶುಭದಾ 1 ಮಧುಮಯ ಮೃದುಭಾಷಾ ಮಧುಹರ ಮಧುಕರ ಮುಖಭೂಷಾ ಅಧರೀಕೃತ ತೋಷಾ ದಾನವ ಮದಜಲನಿಧಿಶೋಷಾ ಮಧುರಾ ಪಟ್ಟಣ- ಕಧಿಪನೆಂದೆಸೆವ ಬುಧರಿಪು ಕಂಸನ ಸದೆದ ಪರೇಶಾ 2 ಶ್ರೀಪತಿ ಸರ್ವೇಶಾ ದುರಿತಮಹಾಪದ್ಗಣನಾಶಾ ತಾಪೋನ್ಮಥನೇಶಾ ಪಾಲಿಸು ಭೂಪ ಶೇಷಗಿರೀಶಾ ನೂಪುರ ಕಿಂಕಿಣಿಕ್ವಣಿತ ಚರಣ ಲ- ಕ್ಷ್ಮೀ ಪರಿರಂಭಿತ ಪರಮಾನಂದದ 3
--------------
ತುಪಾಕಿ ವೆಂಕಟರಮಣಾಚಾರ್ಯ