ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳದೇವಿಯರರಸಗೆ ತುಂಗಮಹಿಮ ತ್ರಿವಿಕ್ರಮಗೆ ಅಂಗನೆಯರು ಸಿರಿರಂಗಗಾರತಿಯನೆತ್ತಿದರೆ ಪ. ಶ್ರೀರುಕುಮಿಣಿ ಮೊದಲಾದ ನಾರಿಯರೆಲ್ಲರು ನೆರೆದು ವಾರಿಜದಳಲೋಚನಗಾರತಿಯನೆತ್ತಿದರೆ 1 ಮುತ್ತಿನ ಹರಿವಾಣದಲಿ ರತ್ನದ ಸಾಲ್ಗಳ ನೆರಪಿ ಚಿತ್ತಜನಯ್ಯಗೆ ಮುತ್ತ್ತಿನಾರತಿಯನೆತ್ತಿದÀರೆ 2 ಚಿನ್ನದ ಹರಿವಾಣದಲಿ ರನ್ನದ ಸಾಲ್ಗಳ ನೆರಪಿ ಚೆನ್ನಕೇಶವನಿಗೆ ಚಿನ್ನದಾರತಿಯನೆತ್ತಿದರೆ 3 ಹೃದಯದ ತಮವ ಗೆಲುವಗೆ ಸದುಗತಿಪಥವ ತೋರುವಗೆ ಸುದತಿಯರೆಲ್ಲರು ಮಂಗಳಾರತಿಯನೆತ್ತಿದರೆ 4 ಚಂದದ ಭೂಷಣಮಣಿಯೊಳು ನಂದಾದೀಪಗಳೆಲ್ಲ ಹೊಳೆಯೆ ಒಂದನಂತವ ಮಾಡಿಕೊಂಬಗಾರತಿಯನೆತ್ತಿದರೆ 5 ಕಂದರ್ಪಕೋಟಿಲಾವಣ್ಯಗೆ ಸೌಂದರ್ಯವಾದ ಮೂರುತಿಗೆ ಇಂದುಮುಖಿಯರೆಲ್ಲ ಮಂಗಳಾರತಿಯನೆತ್ತಿದರೆ 6 ಅಗಣಿತ ಗುಣಸಾಗರಗೆ ನಿಗಮವಂದಿತ ವೈಭವಗೆ ಅಘಕುಲದೂರಗೆ ಮಂಗಳಾರತಿಯೆನೆತ್ತಿದರೆ 7 ನಳಿತೋಳ್ಗಳ ನಸುನಗೆಯ ಹೊಳೆವ ಕಡಗ ಕಂಕಣದ ಸುಲಲಿತ ಕಾಂತಿಗೆ ಮಂಗಳಾರತಿಯೆತ್ತಿದರೆ 8 ಶೇಷವಂದಿತಪದಗೆ ಸುರೇಖಾದಿಗಳೊಡೆಯನಿಗೆ ಭಾಸುರಸುರಮಯಪೀಠಗಾರತಿಯನೆತ್ತಿದರೆ9 ಶ್ರೀಸತಿಯಪ್ಪಿಕೊಂಡಿಪ್ಪಗೆ ವಾಸುದೇವಾದಿವಿಗ್ರಹಗೆ ಕೇಶವ ನಾರಾಯಣಗಾರತಿಯನೆತ್ತಿದರೆ 10 ನಿಖಿಳ ಖಳರ ಸೀಳ್ದನಿಗೆ ಅಕುತೋಭಯನಿಗೆ ಮಂಗಳಾರತಿಯನೆತ್ತಿದರೆ 11 ಕೂರ್ಮ ವರಾಹನಿಗೆ ಕುತ್ಸಿತರೊಲ್ಲದ ಹರಿಗೆ ಚಿತ್ಸುಖರೂಪಗೆ ಮಂಗಳಾರತಿಯನೆತ್ತಿದರೆ12 ಶಂಕೆಯಿಲ್ಲದ ಹಯವದನಗೆ ಕಿಂಕರವರದ ಶ್ರೀಹರಿಗೆ ಪಂಕಜಮುಖಿಯರು ಮಂಗಳಾರತಿಯೆತ್ತಿದರೆ 13
--------------
ವಾದಿರಾಜ