ಆಂಜನೇಯನೆ ಅಮರವಂದಿತ ಕಂಜನಾಭನÀ ದೂತನೆ ಪ.
ಮಂಜಿನೋಲಗದಂತೆ ಶರಧಿಯ ದಾಂಟಿದ ಮಹಾಧೀರನೆಅ.ಪ.
ಆಂಜನೇಯನೆ ನಿನ್ನಗುಣಪರಾಕ್ರಮ ಪೊಗಳಲಳವೆ ಪ್ರಖ್ಯಾತನೆಸಂಜೀವನವ ತಂದು ಕಪಿಗಳ ನಂಜು ಕಳೆದ ಪ್ರಖ್ಯಾತನೆ 1
ಕಾಮನಿಗ್ರಹನೆನಿಸಿ ಸುರರಭಿಮಾನಿ ದೇವತೆಯೆನಿಸಿದೆರಾಮಪಾದಕ್ಕೆರಗಿ ನಡೆದು ನಿಸ್ಸೀಮ ನೀನೆಂದೆನಿಸಿದೆ 2
ಸಿಂಧು ಹಾರಿದೆ ಶೀಘ್ರದಿಂದಲಿ ಬಂದು ಸೀತೆಗೆ ನಮಿಸಿದೆತಂದು ಮುದ್ರೆಯನಿತ್ತು ಮಾತೆಯ ಮನವ ಸಂತೊಷಪಡಿಸಿದೆ 3
ಜನಕತನುಜೆಯ ಮನವ ಹರುಷಿಸಿ ವನವ ಕಿತ್ತೀಡಾಡಿದೆದನುಜರನ್ನು ಸದೆದು ಲಂಕೆಯ ಅನಲಗಾಹುತಿ ಮಾಡಿದೆ 4
ಶ್ರೀರಾಮಕಾರ್ಯವ ವಹಿಸಿ ಅಕ್ಷಕುಮಾರನನು ಸಂಹರಿಸಿದೆಘೋರ ರಕ್ಕಸರೆಂಬುವರನು ಮಾರಿವಶವನು ಗೈಸಿದೆ 5
ಭರದಿ ಬಂದು ಶ್ರೀರಾಮಪಾದಕ್ಕೆರಗಿ ಬಿನ್ನಹ ಮಾಡಿದೆಉರಗಗಿರಿ ಹಯವದನನ ಪರಮಭಕ್ತನೆಂದೆನಿಸಿದೆ6