ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಹರಿ ಮೂಜಗದೊಳು ನೀನು ತೇಜವುಳ್ಳವನಾಗಿ ಪ ಕಾಲದಿ ನಿನ್ನಯ ಮೇಲಿಹ ನಿರ್ಮಾಲ್ಯ ಮಾಲೆಯನೆಲ್ಲ ವಿಸರ್ಜಿಸಿ ತೊಳೆದು ನೀಲಮಾಣಿಕ ವಜ್ರಮಯವಾದ ಪೀಠದ ಮೇಲೆ ವಾಲಗವಾಗಿ ಲೀಲೆಯ ತೋರುತ1 ಮೊದಲು ಸಂಕಲ್ಪಿಸಿ ತುಳಸಿ ಶ್ರೀಗಂಧದಿ ಉದಕ ಶುದ್ಧವ ಮಾಡಿ ಅದರೊಳು ಬಳಿಕ ವಿಧಿಸಿಯೆ ಮತ್ತೇಳು ನದಿಯನುಚ್ಚರಿಸಲು ಒದಗಿ ಬಾರೆಲೊ ಕರಚರಣ ಮಜ್ಜನಕೀಗ 2 ಮಾನಸದಘ್ರ್ಯವು ಆಚಮನಗಳು ನಾನಾ ಪಂಚಾಮೃತ ಫಲವಭಿಷೇಕವು ಗಾನ ಸೂಕ್ತಗಳಿಂದ ಮಧುಪರ್ಕಾದಿಗಳು 3 ವಸ್ತ್ರವಾಭರಣವು ಯಜ್ಞಸೂತ್ರವ ತೊಡಿಸಿ ಚಿತ್ರವಾಗಿಹ ಗಂಧ ಅಕ್ಷತೆವಿಡಿಸಿ ಪತ್ರಪುಷ್ಪವು ಶ್ರೀತುಳಸಿ ಮಾಲೆಗಳಿಂದ ಸ್ತೋತ್ರವು ಸಾಹಸ್ರನಾಮಗಳಾಯಿತು 4 ಧೂಪಮಾಧ್ರೂಪಯ ದೀಪದ ದರುಶನವು ಆದಷ್ಟು ಸರ್ವೋಪಚಾರಗಳು ಕದಳಿ ನಾರಿಕೇಳÀವು ಪರಿ ನೈವೇದ್ಯ ದಯಾಪರಮೂರ್ತಿ 5 ಆಗರದೊಳು ಬೆಳೆದ ನಾಗವಲ್ಲಿಯ ದಳ ಪೂಗಿಯಫಲ ಸಹ ನಾಗಶಯನಗಿಟ್ಟು ಬೇಗದಿ ಮಂಗಳ ಪದಗಳ ಹೇಳಿ ಲೇ ಸಾಗಿ ಎತ್ತುವ ಅಮೋಘದಾರತಿಗಳ 6 ಮಾಡಿದ ಪೂಜೆಯ ನೋಡಿ ಕರುಣದಿಂದ ಬೇಡಿದಿಷ್ಟವನೀಯೊ ರೂಢಿಯ ಒಡೆಯ ಪಾಡಿ ಪೊಗಳುವೆ ನಿನ್ನ ಪಂಥ ಬೇಡೆನ್ನೊಳು ಅನುದಿನ ವರಾಹ ತಿಮ್ಮಪ್ಪ 7
--------------
ವರಹತಿಮ್ಮಪ್ಪ