ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಜಲೆನ್ನಲಿಬಹುದೆ ಮನುಜರಿದನ ಅಘವನಧ- ನಂಜಯ ಸುವೈಕುಂಠದಾಸರ ವದನದ ಕಣವ ಪ. ವದನವೆಂಬಾಕಾಶದಲಿ ಭಕುತಿ ಜೀಮೂತ ಪದುಮನಾಭನ ನಾಮಾಮೃತದ ಕಡಲ ಮುದದಿಂದ ತಕ್ಕೊಂಡು ಎನ್ನಂಗ ದೇಹದಲಿ ಹದನರಿತು ಸುರಿದು ಮುಕ್ತಿಫಲವ ಬೆಳೆಸಿದುದನು 1 ಹೃದಯ ಕಾರಾಗೃಹದಿ ಶ್ರೀಹರಿಯನಾವಾಗ ಹುದುಗಿ ಅಗಲಿಸಿದ ಕಾರಣದೊಳಂಗುಟದಿ ಉದಿಸಿ ಗಂಗೆಯು ಪೋಪೆಡೆಯು ಅಳಿದಿರೆ ಇವರ ವದನದಲಿ ಪೊರಟೆನ್ನಮ್ಯಾಲೆ ಹರಿದುದನು 2 ಪರಸನ್ನ ಹಯವದನ ಚರಣಸರಸಿಜಮಧು- ಕರ ಸುವೈಕುಂಠದಾಸೋತ್ತಮನ್ನ ವರವದನದಲಿ ವೇದಶಾಸ್ತ್ರಾಗಮದ ತಾ- ತ್ಪರಿಯ ಬಿಂದುಗಳೆನ್ನ ಮ್ಯಾಲೆ ಹರಿದುದನು 3
--------------
ವಾದಿರಾಜ
ಭಗವಂತನ ಸಂಕೀರ್ತನೆ ಅನುದಿನ ನೆನೆಯಲೊ ಹನುಮನಿಗತಿ ಪ್ರಿಯ ಪರಮ ಪಾವನ ರಾಮನಾಮ ಪ ಇನಕುಲ ಭೂಷಣ ಮುನಿಜನ ತೋಷಣ ಜಾನಕಿರಮಣನ ನಾಮ ಅ.ಪ ಗೌತಮ ಸತಿಯೆ ಪುನೀತಳ ಮಾಡಿ ಪ್ರ- ಖ್ಯಾತಿ ಪೊಂದಿದ ದಿವ್ಯನಾಮ ಶೀತಲ ಕಿರಣ ಭೂಷಣನ ಧನುವ ಮುರಿದು ಸೀತೆಯ ಪೊಂದಿದ ನಾಮ 1 ಜನಕನ ವಚನವನುಳಿಸುವ ನೆವದಲಿ ವನವಾಸ ಮಾಡಿದನ ನಾಮ ವನದಲಿ ಖರದೂಷಣ ಮುಖ ದನುಜರ ಹನನ ಮಾಡಿದ ದಿವ್ಯನಾಮ2 ಶರಭಂಗಮುನಿಗೆ ಪರಮ ಪದವನಿತ್ತ ಪರಮ ಪವಿತ್ರನ ನಾಮ ನಾಸಿಕ ಕರ್ಣ ಮುರಿಸಿದವನ ಶುದ್ಧ ನಾಮ 3 ಭೂಮಿಜೆಯನು ಮೋಸದಿಂದ ಅಗಲಿಸಿದ ಮಾರೀಚನ ಕೊಂದ ನಾಮ ಸ್ವಾಮಿಯ ಪ್ರೇಮಕ್ಕೆ ಮಡಿದ ಜಟಾಯುಗೆ ಅಭಯ ಹಸ್ತವನಿತ್ತ ನಾಮ 4 ಆ ಮಹಾ ಹನುಮನ ಕಾಮಿತದಂತೆ ಮಹೇಂದ್ರ ಸುತನ ಕೊಂದ ನಾಮ ಕಮಲ ಸುಹೃದತನಯನಿಗೆ ಸಾಮ್ರಾಜ್ಯವನಿತ್ತ ನಾಮ 5 ಪರಿಪರಿವಾರದಿಂ ಶರಧಿಯೊಳ್ ಸೇತು ಬಂಧನವ ಮಾಡಿದ ರಾಮನಾಮ ದುರುಳ ರಾವಣ ಮುಖ ರಕ್ಕಸರನೆ ಕೊಂದು ಧರಣಿ ಸುತೆಯ ಕಂಡ ನಾಮ6 ಶರಣವ ಪೊಂದಿದ ಭಕುತ ವಿಭೀಷಣಗೆ ತರುಣಿ ಸೀತೆ ಲಕ್ಷ್ಮಣರಿಂದ ಕೂಡಿ ಪು ಷ್ಪಕವನೇರಿದ ಸಾಧು ನಾಮ 7 ಉರುತರ ತಪದಲಿ ನಿರತನಾದ ತಮ್ಮ ಭರತನ ಉಳಿಸಿದ ನಾಮ ದೊರೆತನವೊಂದಿ ಸಕಲ ಸುಜನರುಗಳಿಗೆ ಪರತರ ಸುಖವಿತ್ತ ನಾಮ 8 ತನ್ನ ಭಕುತರೊಳು ಉನ್ನತನೆನಿಸಿದ ಘನ್ನಮಾರುತಿಗೊಲಿದ ನಾಮ ಪ್ರ ಸನ್ನನಾಗಿ ಸಂತತ ಇವನಿಗೆ ತನ್ನ ಸಹ ಭೋಗ ಸುಖವಿತ್ತ ನಾಮ 9
--------------
ವಿದ್ಯಾಪ್ರಸನ್ನತೀರ್ಥರು