ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಣಾತೀತ ಸದ್ಗುರು ಗಣನಾಥ ಘನಸುಖದಾಯಕ ಸದೋದಿತ ಧ್ರುವ ಅನುದಿನ ಮಾಡುವೆ ಮನೋಹರ ಅಣುರೇಣುದೊಳು ನೀ ಸಾಕ್ಷಾತ್ಕಾರ ಮುನಿಜನರಿಗಾಗುವಿ ಸಹಕಾರ ನೀನಹುದೋಭಕ್ತರ ವಿಘ್ನಹರ 1 ನಿಮ್ಮ ಭೋಧಗುಣವೆ ಸರಸ್ವತಿ ಸಮ್ಯಜ್ಞಾನ ಬೀರುವ ನಿಜಸ್ಥಿತಿ ಬ್ರಹ್ಮಾದಿಗಳೊಂದಿತ ನಿಜಖ್ಯಾತಿ ಬ್ರಹ್ಮಾನಂದ ದೋರುವ ಫಲಶ್ರುತಿ 2 ಬೇಡಿಕೊಂಬೆ ನಿಮಗೆ ಅನುದಿನ ಕುಡುವವರಿಗೆ ನೀ ನಿಧಾನ ಮೂಢ ಮಹಿಪತಿ ಒಡೆಯ ನೀ ಪೂರ್ಣ ಮಾಡುತಿಹ ನಿತ್ಯವು ನಾ ನಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾನೆ ತಾನಾದನಮ್ಮಾ ಎನ್ನೊಳು ಘನಬ್ರಹ್ಮ ಧ್ರುವ ಕಣ್ಣಿಲೆ ನೋಡಲಿಕ್ಕೆ ಕಣ್ಣಿನೊಳಾದನಮ್ಮ ಕಣ್ಣಿಗೆ ಕಣ್ಣಾಗಿ ಪೂರ್ಣ ಕಾಣಿಸಿದಾನಂದೋಬ್ರಹ್ಮ ಅಣುರೇಣುದೊಳು ವ್ಯಾಪಿಸಿ ಜನ ಮನ ದೊಳು ತುಂಬಿಹ ತನುಮನದೊಳು ತಾನೆತಾನಮ್ಮ 1 ಎತ್ತ ನೋಡಿದತ್ತ ಸುತ್ತ ಸೂಸುವನಮ್ಮ ನೆತ್ತಿ ಒಳಗೆ ಪೂರ್ಣ ಮೊತ್ತವಾದ ಪರಬ್ರಹ್ಮ ಅನುದಿನ ಸಂತತ ಸದ್ಗುರು ಪೂರ್ಣ ಅಂತರಾತ್ಮದೊಳಗಿಹನಮ್ಮ 2 ನಾನು ನಾನೆಂಬುದಿದು ಇಲ್ಲದಂತಾಯಿತು ನಮ್ಮ ತಾನೆ ತಾನಾದ ನಿಜ ಓಮಿತ್ಯೇಕಾಕ್ಷರ ಬ್ರಹ್ಮ ಚೆನ್ನಾಗಿ ಮಹಿಪತಿಗೆ ಸನ್ಮತಸುಖದೋರಿತುಉನ್ಮನವಾಗ್ಯೆನ್ನೊಳಗೆ ಘನಸುಖ ಹೊಳೆಯಿತು ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು