ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮ ನಿವೇದನೆ ಇಂದು ಪಾವನವಾಗಿರೊ | ಇಂದಿರಾ ರಮಣನ್ನ ದಿನ ವ್ರತವ ಮಾಡಿ ಪ ಅನುಜ ನಿಜಾಂಗನೆ | ತನಯರು ನೆರೆಹೊರೆ ಮನ ಜನಕೆ | ಸಿರಿ | ದಿನ ತ್ರಯವನು ಅನುಸರಿಸಿರೆಂದು 1 ಏಕಾದಶಿದನ ವಿಕೇತನದಲಿ ಪಾಕ ಮಾಡಿದರದು | ಕಾಕಮಾಂಸ ಲೋಕದೊಳಗೆ ಸರಿ | ಲೋಕದೊಳಗೆ ಎಂದು | ತಾ ಕೂಗಿ ಸುಖದಲ್ಲೀ | ವಾದ ಪೇಳುತಲಿದ್ದು ಏಕ ಭಕುತಿಯಲ್ಲೀ2 ಹರಿದಿನದಲ್ಲಿ ನೀರು ಬೆರಳಲಿ ಸುರಿದಾ | ಭೂಸುರನು ಚಾಂಡಾಲನು ನಿರುತದಲೀ | ವರಗೋಮಾಂಸ ನರಕಾ | ನರಿ ನಾಯಿರಾಸ | ಸೂಕರ ಭಕ್ಷಣಿಗಿಂತ | ಪರಮ ಉತ್ತಮನೆಂದು 3 ಪ್ರಾಣತ್ಯಾಗವಾಗಿ ಹಾನಿ ಪ್ರಾಪುತದಿಂದ | ಏನೇನು ಸಂಕಟ ತಾನೊದಗೆ | ಆನಂದ ಮತಿ ಈವಾ ಶ್ರೀನಾಥನ ದಿವಸ | ಧಾನ್ಯದಲಿಟ್ಟು ನಿದಾನಕೆ ಗತಿ ಎಂದು 4 ಇತರ ದಿವಸದಲ್ಲಿ ಅತಿಶಯದಿಂದಲೀ | ಕೃತ ಕರ್ಮಗಳು ವಿಹಿತವಹುದೂ | ರತಿಪತಿಪಿತನ ಅಪ್ರತಿವಾಸರದಲ್ಲೀ | ಅತಿ ಅವಶ್ಯಕವಾ ವರ್ಜಿತ ಮಾಡಿ ಸಜ್ಜನರು 5 ಎಲೆ ಹಾಕದೆ ಜಾಗರವ ಬೇಸರದಲೆ | ಲವಲವಿಕೆಯಿಂದ ಕವಿಗಳೊಡನೆ | ತವಕದಿಂದಲಿ ಪಾಡುತ ಗಾಯನ ಶುದ್ಧಾ | ಶ್ರವಣ ಮಾಡುತ್ತ ಸದಾ | ಪವನ ಮತದೊಳಿದ್ದು6 ದಶಮಿ ವಂದು ಏಕಾದಶಿ ಎಂಟು ತಿಳಿದು | ದ್ವಾದಶಿ ಐದು ಹ | ದಿನಾಲ್ಕು ಎಸವ ಝವಾ | ಪುಶಿಯಲ್ಲ ಇದು ಸಿದ್ಧಾ ಅಸುಯವ ಬಡದಲೇ | ಕುಶಲದಿಂದಲಿ ವ್ರತ ಚರಿಸುತ್ತಲಿ ಚನ್ನಾಗಿ 7 ಏಳೊಂದು ವತ್ಸರದ ಮೇಲೆ | ವತ್ಸರ ಬಿಟ್ಟು ವಾಲಾಯ ಉಳಿದವರು | ನೀಲವರ್ಣನ ವ್ರತವಾ ಲೀಲೆಯಿಂದಲಿ ಚರಿಸಿ 8 ಆವಾದಾದರ ಬಿಡದಿರೀ | ಕೇವಲ ಸಾಧನವೂ | ಈ ವಾರವು ದೇವೇಶ ವಿಜಯವಿಠ್ಠಲಗೆ ಸಮರ್ಪಿಸೆ | ಸೇವಿಯ ಪಾಲಿಸಿ ಕೈವಲ್ಲ್ಯದಲಿ ಇಡುವಾ 9
--------------
ವಿಜಯದಾಸ
ಕಾಮಿತಾರ್ಥದಾಯಿನೇ | ತುಳಸಿ ಕಲ್ಯಾಣಿ ಶ್ಯಾಮಾ ವಿಶಾಲನಯನೇ ಪ ಹಸುರು ಕಂಚುಕಧರೆ ಆನಂದ ರಸಿಕೇ ಶಶಿ ಬಿಂಬಸಮ ಸುಂದರಮುಖೇ ಉಸಿರುಬಿಡದೆ ನಿನ್ನ ಕೊಸರುವೆ ವರಗಳ ಹಸನಾಗಿ ಕೊಡುವೆನೀ ಅತಿಶಯದಿಂದಲಿ 1 ಬಣ್ಣಾದ ಸರಪಳಿ ಹಾಕಿದ ಕೊರಳೇ ಬಟ್ಟ ಮುತ್ತಿನ ಹರಳೇ ಹುಣ್ಣಿಮೆ ಚಂದ್ರನಂತೆ ಸುಂದರಮುಖದವಳೇ ಪನ್ನಂಗ ಶಯನಗೆ ಮಾಡಿದೆ ಮರುಳೇ 2 ಬಡನಡುವಿಗೆ ಒಡ್ಯಾಣಾ | ರುಳಿ ಪೈಜಣ ಕಡಗಾ ಕಂಕಣ ಹೊಳಿಯುವ ಜಾಣೆ | ನಡೆದು ಬಾರೆ ಶ್ರೀ ನರಸಿಂಹವಿಠಲನ ಪಾದ ಬಿಡದೆ ಭಜಿಪೆನಮ್ಮ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ಮನ್ಮಥನಯ್ಯನ ಮನದಲಿ ಸ್ಮರಿಸಿರೊ ಮನ್ಮಥ ನಾಮ ಸಂವತ್ಸರದಿ ಪ ಸುಮ್ಮನೆ ಕಾಲವ ಕಳೆಯುವದೇತಕೆ ಬ್ರಹ್ಮನಪಿತ ನಂಘ್ರಿಗಳ ಭಜಿಸುತ ಅ.ಪ ಬಂಧು ಬಳಗ ಮಂದಿಮಕ್ಕಳೆಲ್ಲರು ಕೂಡಿ ಒಂದೆ ಸ್ಥಳದಿ ಭಜನೆಯಮಾಡಿ ಇಂದಿರಾರಮಣನ ಚಂದದಿ ಪೊಗಳಲು ಬಂದ ದುರಿತಗಳ ಪೊಂದಿಸನೆಂದೆಂದು 1 ಮಾಕಮಲಾಸನ ಲೋಕದ ಜನರಿಗೆ ತಾಕಾಣಿಸಿ ಕೊಳ್ಳದೆ ಇಹನು ಶ್ರೀಕರ ಸಲಹೆಂದು ಏಕ ಭಕುತಿಯಲಿ ಲೋಕವಂದ್ಯನ ಸ್ತುತಿಗೆ ನೂಕುವ ಅಘಗಳ 2 ಅತಿಶಯದಿಂದಲಿ ಸತಿಸುತರೆಲ್ಲರು ಪತಿತಪಾವನನ ಕೊಂಡಾಡುತಲಿ ಗತಿ ನೀನಲ್ಲದೆ ಮತ್ತೆ ಹಿತರ್ಯಾರಿಲ್ಲವೆನೆ ಸತತ ಸುಕ್ಷೇಮವಿತ್ತು ಪಾಲಿಸುವಂಥ 3 ಶ್ರಮವ ಪರಿಹರಿಸೆಂದು ನಮಿಸಿಬೇಡುವ ಭಕ್ತ ಜನರನು ಸಂತೈಸುತಲಿಹನು ಹನುಮ ಭೀಮ ಮಧ್ವಮುನಿಗಳ ಸೇವಿಪ ಮನುಜರ ಮನೋರಥಗಳನೆ ಪೂರೈಸುವೊ 4 ವತ್ಸರ ಆದಿಯಲಿ ಅಕ್ಷರೇಡ್ಯನ ಪಾದ ಕ್ಷಿಪ್ರದಿಂದಲಿ ಸೇವಿಪ ನರನ ಭಕ್ತವತ್ಸಲ ತನ್ನ ಭಕ್ತರ ಸಂಗದೊಳಿಟ್ಟು ಸಂತೈಸುವ ಸತ್ಯಸಂಕಲ್ಪ ಶ್ರೀ5 ತಾಳ ತಂಬೂರಿ ಸುಸ್ವರಗಳಿಂದಲಿ ಬಹು ನೇಮದಿಂದಲಿ ಸರುವರು ಕೂಡಿ ಗಾನಲೋಲನ ಭಜನೆಯ ಮಾಡುತ ಸತ್ಯ ಸ್ವಾಮಿಯ ಗುಣಗಳ ಪೊಗಳುವ ಸುಜನರು 6 ಸಡಗರದಿಂದಲಿ ಕಡಲೊಡೆಯನ ಗುಣ ಪೊಗಳುತ ಹಿಗ್ಗುತ ಅಡಿಗಡಿಗೆ ಕಡಲ ಶಯನ ಕಮಲನಾಭ ವಿಠ್ಠಲನೆಂದು ತೊಡರು ಬಿಡಿಸುವ ಶ್ರೀ 7
--------------
ನಿಡಗುರುಕಿ ಜೀವೂಬಾಯಿ
ರಕ್ಷಿಸೆನ್ನ ರಮಣ ಪಂಚಪರಣಾ ಜಗತ್ಪಾವನಾ | ಮೋಕ್ಷದಾಯಕ ಯಂತ್ರೋದ್ಧಾರಕ ಹನುಮಂತಾ ಪ ಗತಿಯ ಕಾಣೆನೊ ಸದಾ ಗತಿಯೊ ಎನ್ನ ಮನಸು | ನಿನ್ನ ನಾಮವ ಬೇಡಿದೆ | ಹಾಡಿ ಪಾಡಿದೇ | ಪ್ರತಿದಿನ ದಯ ಮಾಡಿದೆ ವರವನ ಬೇಡಿದೆ | ಅತಿಶಯದಿಂದಲಿ ವಿಪ್ರಜಿತು ವಿರೋಧಿಯ ವಿಪ್ರ1 ವೀಣಾರೋಚನಾ ವಿಜ್ಞಾನಾಭಿಮಾನಿ ನಿ | ದಾನ ತ್ರಿಜಗದ್ಗುರುವೆ ಸುರತರುವೇ | ಕರವ ಮುಗಿದು ಕರವೇ | ಧ್ಯಾನದಿಂದಲಿ ಬೆರವೆ ಸುತ್ಯನ್ಯರವೇ | ಜನನವ ಬಿಡಿಸೋದು ಗಾನವ ನುಡಿಸೋದು 2 ಭಾಷಿಸುವ ಮಾತಂಗ ಪರ್ವತದಲಿ ತುಂಗಾ | ವಾಸವ ವಿನುತ ಸತ್ವಕಾಯಾ | ನಿತ್ಯ ಜಪಿತಾ | ಲೇಸು ಸುದರುಶನ ತೀರ್ಥ ತೀರದಲ್ಲಿಪ್ಪಾ |ಶ್ರೀಶ ವಿಜಯವಿಠ್ಠಲನ ದಾಸನ ಮಾಡಿ ಮುನ್ನಾ 3
--------------
ವಿಜಯದಾಸ
ಆತನ ಪಾಡುವೆನನವರತ |ಪ್ರೀತಿಯಿಂದಲಿ ತನ್ನ ಭಕುತರ ಸಲಹುವ ಪಆವಾತನ ಕೀರ್ತಿಯನುಪರೀಕ್ಷಿತ ಕೇಳೆ |ಪಾವನನಾದನು ಮೂಜಗವರಿಯೆ ||ಭಾವಶುದ್ಧಿಯಲಿ ಶುಕನಾರನು ಪೊಗಳುವ |ಆವಗಂ ಪ್ರಹ್ಲಾದನಾದವನ ನೆನೆವನಯ್ಯ 1ಶಿಲೆಯ ಬಾಲೆಯ ಮಾಡಿದ ಪಾದವಾರದು |ನಳಿನ ಸಂಭವನನು ಪೆತ್ತವನಾರು ||ಕಲಿಯುಗದ ಮನುಜರಿಗೆ ಆರನಾಮವುಗತಿ |ಇಳೆಯ ಭಾರವನಿಳುಹಿ ಸಲಹಿದರಾರಯ್ಯ 2ದ್ರುಪದನ ಸುತೆಯ ಮಾನರಕ್ಷಕನಾರು |ನೃಪಧರ್ಮನಿಗೆ ಸಂರಕ್ಷಕನಾರು |ಕೃಪೆಯಿಂದ ವಿದುರನ ಮನೆಯಲುಂಡವನಾರು |ಆಪತ್ಕಾಲದಿ ಗಜವ ಸಲಹಿದರಾರಯ್ಯ 3ಅತಿಶಯದಿಂದ ಅರ್ಜುನಗೆ ಸಾರಥಿಯಾಗಿ |ರಥವ ಪಿಡಿದು ನಡೆಸಿದವನಾರೊ ||ಪೃಥಿವಿಯೆಲ್ಲವಬಲಿ ಆರಿಗೊಪ್ಪಿಸಿದನು |ಮತಿವಂತ ಧ್ರುವನ ರಕ್ಷಕನಾರು ಪೇಳಯ್ಯ 4ಸಾಗರನ ಮಗಳಿಗೆ ಆರ ನಾಮವೆಗತಿ |ಯೋಗದಿ ನಾರದನಾರ ಭಜಿಪನಯ್ಯ ||ರಾಗರಹಿತ ಹನುಮಂತನೊಡೆಯನಾರು |ಭಾಗವತರ ಪ್ರಿಯ ಪುರಂದರವಿಠಲ 5
--------------
ಪುರಂದರದಾಸರು