ಒಟ್ಟು 6 ಕಡೆಗಳಲ್ಲಿ , 1 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ ಧ್ರುವ ಕರ್ಮಕಮಂಧವಿಲ್ಲ ವರ್ಮ ತಿಳಿದವ ಬಲ್ಲ ಧರ್ಮ ಗುರುವಿನ ಸರಿ ಇಲ್ಲ ನಿರ್ಮಲ ನಿಜವೆಲ್ಲ 1 ಅನುಭವಕನುಭವದ ಅನಂದೋ ಬ್ರಹ್ಮದ ಬೋಧ ಏನೇಂದ್ಹೇಳಲಿ ಸುಸ್ವಾದ ತಾನೆ ತಾನಾದ 2 ಸಾಧಿಸಿದಲ್ಲದೆ ಖೂನ ಇದರಿಟ್ಟು ಮಹಿಪತಿ ಪೂರ್ಣ ಒದಗಿ ಕೈಗೂಡದು ಧನ ಸದ್ಗುರು ಚರಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಶ್ರೀ ಗುರುಪಾದಪದ್ಮ ನೋಡುವ ಎಂದೆಂದು ಬಿಡದೆ ಭಾವಭಕ್ತಿ ಮಾಡುವ ಧ್ರುವ ಮನವೆಂಬ ಮನಮಂಟಪವನಾಡುವ ನೆನವು ನವರತ್ನದ ಸಿಂಹಾಸನಿಡುವ ಙÁ್ಞನಧ್ಯಾನದಡಬಲದಿ ಪಿಡಿವ ಅನುವಾಗಿ ಅನಿಮಿಷದಲಿ ನೋಡುವ 1 ತನುವೆಂಬ ತಾರತಮ್ಯಭಾವ ಮಾಡುವ ಅನುಭದಿಂದನುಪಮನ ನೋಡುವ ಆನಂದವೆಂಬ ಅಭಿಷೇಕವ ಮಾಡುವ ಮನೋ ಅಭೀಷ್ಟೆಯ ಸುವಸ್ತ್ರನೀಡುವ 2 ಬುದ್ಧಿ ಭಾವನೆಯ ಗಂಧಾಕ್ಷತಿಡುವ ಶುದ್ಧ ಸುವಾಸನೆ ಪರಿಮಳ ಮಾಡುವ ಶಬ್ದ ಸುವಾಕ್ಯವೇ ಪುಷ್ಪವ ನೀಡುವ ಸಿದ್ಧಾಂತವೆಂಬುದೇ ಸುಸೇವೆ ಮಾಡುವ 3 ಪ್ರಾಣ ಪಂಚವೇ ಪಾದಪೂಜೆಯ ಮಾಡುವ ಪುಣ್ಯಪೂರ್ವಾರ್ಜಿತ ಫಲಗಳಿಡುವ ಅನೇಕವಾದ ಪರಿಪೂಜೆ ಮಾಡುವ ಧನ್ಯ ಧನ್ಯವಾಗುವ ಮುಕ್ತಿಬೇಡುವ 4 ನಿರ್ವಿಕಲ್ಪ ನಿಜಮೂರುತಿ ನೋಡುವ ಪೂರ್ವಕರ್ಮವೆಂಬ ಧೂಪಾರ್ತಿ ಮಾಡುವ ಅರುವೆಂಬ ದೀಪದಿ ಏಕಾರ್ತಿ ಮಾಡುವ ಸರ್ವಕಾಲದಲಿ ಸಂತೋಷಬಡುವ 5 ಜೀವ ಭಾವನೆಂಬ ನೈವೇದ್ಯವಿಡುವ ವಿವೇಕುದಕ ಸಮರ್ಪಣೆ ಮಾಡುವ ತ್ರಿವಿಧಗುಣವೆಂಬ ತಾಂಬೋಲನಿಡುವ ಅವಾವಪರಿಯು ಪ್ರಾರ್ಥನೆ ಮಾಡುವ 6 ಪಂಚತತ್ವದ ಪಂಚಾರತಿ ಮಾಡುವ ಚಂಚಲವಿಲ್ಲದೆ ಚಿದ್ಛನ ನೋಡುವ ಪಂಚಭೂತವೆಂಬಾರತಿ ಮಾಡುವ ಸಂಚಿತಕ್ರಿಯ ಮಂತ್ರಪುಷ್ಪನೀಡುವ 7 ದಿವ್ಯ ಯೋಗ ಭೋಗ ಚೌರ ಢಾಳಿಸುವ ಅವಲೋಕನೆಯ ಬೀಸಣಿಕೆ ಬೀಸುವ ಪಾದ ನಮಿಸುವ ಭವಬಂಧನದ ಮೂಲ ಛೆÉೀದಿಸುವ 8 ನಮ್ರತವೆಂಬ ಸಮಸ್ಕಾರ ಮಾಡುವ ಸಂಭ್ರಮದಿಂದ ಸ್ವಸ್ವರೂಪ ನೋಡುವ ಪ್ರೇಮಪ್ರೀತೆಂಬ ಪ್ರದಕ್ಷಿಣಿ ಮಾಡುವ ಜನ್ಮ ಮರಣದ ಹಾದಿಯು ಬಿಡುವ 9 ನಿರ್ಗುಣದಿಂದ ಸ್ವರೂಪ ನೋಡುವ ನಿಗಮಗೋಚರನೆಂದು ಸ್ತುತಿ ಪಾಡುವ ಅಗಣಿತಗುಣ ಸುಕೀರ್ತಿ ಸೂರ್ಯಾಡುವ ಜಗದೊಳಾನಂದದಿಂದ ನಲಿದಾಡುವ 10 ಅನಾಹತವೆಂಬ ಧ್ವನಿವಾದ್ಯ ಮಾಡುವ ಅನಂದೋ ಬ್ರಹ್ಮದೊಳು ಮುಳಗ್ಯಾಡುವ ಭಾನುಕೋಟಿತೇಜ ಪ್ರಕಾಶ ನೋಡುವ ದೀನಮಹಿಪತಿ ಸ್ವಾಮ್ಯೆಂದು ಕೊಂಡಾಡುವ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಗುರುಕೃಪೆಯದಾಟಗಳು ಧ್ರುವ ಮನಯೋಗದ ಗೋಲ್ಹಾಟಗಳು ಅನುದಿನ ಅನಿಮಿಷ ನಯನದ ನೋಟಗಳು ಜ್ಞಾನ ಸಮುದ್ರದ ಲೋಟಗಳು ಏನೇಂದ್ಹೇಳಲಿ ಸ್ವಾನಂದದ ಸುಖ ಅನಂದೋಬ್ರಹ್ಮದ ಆಟಗಳು 1 ಸೊನ್ನೆಯ ಸೂಟಿಗಳು ತಾಳಮೃಂದಗವು ಭೇರಿಡುತಿಹ್ಯ ಕೇಳುವ ಧಿಮಿಧಿಮಿಟಗಳು ತಲ್ಲೀನದಿ ಶ್ರುತಿಘೋಷಾಲಿಸುವನೀದೃಶ್ಯದ ಉದಾಟಗಳು ತಿಳಿಯಲು ಬಲು ಆವ್ಹಾಟಗಳು 2 ಬಲ್ಲವೇನು ನರಕೀಟಗಳು ದೇವದೇವೋತ್ಮನ ನೋಟಗಳು ದಯಕರುಣದಿ ಜೀವನ ¸ದ್ಗೈಸುವ ಭವನಾಶನ ಕೃಪಾದೃಷ್ಟಿಗಳು ಧನ್ಯಧನ್ಯ ಕುಲಕೋಟಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಜ್ಯೋತಿರ್ಮಯಾನಂದ ಶ್ರೀನಾಥಗೆ ಜಯ ಜಯಾನಂದ ಸದೋದಿತಗೆ ಧ್ರುವ ಭೋಕ್ತ ಸದ್ಗುರುನಾಥಗೆ ಸದ್ಗೈಸುವ ಸದಾ ಸುಶ್ಯಾಂತಿಗೆ 1 ಸದ್ಗೈಸುವ ಸದಾ ಶ್ಯಾಂತ ಶ್ರೀನಿಧಿಗೆ ಸದ್ಭಕ್ತಿಲಿ ಎನ್ನಿ ಸನ್ನಿಧಿಗೆ 2 ಸ್ವಾನುಭವದ ಕಂದ ಅನಂದೋ ಬ್ರಹ್ಮಗೆ ಜ್ಞಾನÀ ಜ್ಞಾನಕನುಪಮಗೆ 3 ಜ್ಞಾನ ವಿಜ್ಞಾನÀಕನುಪಮಾಗಿಹಗೆ ಜಯ ಜಯವೆನ್ನಿ ಶ್ರೀ ಮಹಿಪತಿಸ್ವಾಮಿಗೆ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಗೊಂಡವರಲ್ಲಿ ಘನಗೊಳ್ಳಿ ಜ್ಞಾನಾಗಮ್ಯದ ಧ್ರುವ ಮುನಿಜನರಾರಾಧಿಸುವ ನಿಧಾನ ಅನಿಮಿಷದಲಿ ನೋಡುವ ತ್ರಾಣ ಉನ್ಮನಲಿಹ ಧನ 1 ಜಾಣನೇ ಮಾಡಿಕೊಂಬನು ಪರೀಕ್ಷೆ ಸ್ವಾನುಭವದಲಿ ಪ್ರತ್ಯಕ್ಷ ಅನುದಿನದಲಿಹುದ ದಕ್ಷ ಘನಗುರು ಕಟಾಕ್ಷ 2 ಮಹಿಪತಿಸ್ವಾಮಿಯು ಪರಬ್ರಹ್ಮ ಖೂನಮಾಡವಗಿದು ಸಂಭ್ರಮ ಅನಂದೋಬ್ರಹ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸಿದೇ ನೋಡಿ ಪೂರ್ಣ ಆದಿ ತತ್ವದ ಸುಸ್ಥಾನ ಭೇದಿಸುವದನುದಿನ ಸದಾನಂದ ಗುರುಜ್ಞಾನ ಧ್ರುವ ಮಾತಿನಂತಲ್ಲವಿದು ಸ್ವಾತ್ಮಸುಖದ ಸಾಧನ ಶ್ರುತಿಗಗೋಚರ ನೋಡಿ ಪ್ರತ್ಯೇಕದನುಸಂಧಾನ ಅತಿಗುಹ್ಯಗೂಢವಿದು ಹಿತೋಪಾಯದ ಖೂನ ರತಿಗೊಟ್ಟುನೋಡಿ ಪ್ರತ್ಯಕ್ಷ ಇಹ್ಯ ನಿಧಾನ 1 ನಡಿನೋಟ ನೀಟಮಾಡಿ ಪಡಕೊಳ್ಳದೆ ಸ್ವಹಿತ ನುಡಿಆಟದೋರಬ್ಯಾಡಿ ಕೂಡಿ ಸುಜ್ಞಾನÀಸನ್ಮತ ಬಡಬ್ಯಾಡಿ ನಾನಾಶ್ರಮವಿಡಿಯದೆ ಸುಗಮ ತಾ ಇಡಿದು ತುಂಬೇದ ಸಾಂದ್ರ ನೋಡಿ ಅನಂದೋಭರಿತ 2 ಸಾಧನಕಿದೇ ಮುಖ್ಯ ಸಾಧಿಸಿದೆ ಗುರುದಯ ಇದಕಿಲ್ಲ್ಲಿನ್ನೊಂದಧಿಕ ಬುಧಜನರ ಉಪಾಯ ಅದರಿಂದೊಲುವ ತಾನು ಸದ್ಗುರು ಭಾನುಕೋಟ್ಯುದಯ ಸದ್ಗೈಸಿ ಮಹಿಪತಿಯ ಸದೋದಿತ ಉದಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು