ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಮುತ್ತೈದೆಯಾದೆ ನಾ ಮುರವೈರಿ ದಯದಿ ನಿತ್ಯತೃಪ್ತನು ಎನ್ನ ನಿಜಕರವ ಪಿಡಿಯೆ ಪ. ಗುರುಗಳುಪದೇಶಾಂಬುಧಿಯಲಿ ಪುಟ್ಟಿದ ಎನ್ನ ಕರೆದರು ಕಮಲಾಭಿದಾನದಿಂದ ವರುಷವೆಂಟಾಗೆ ಗುರುಜನಕ ಎನ್ನನುದಯದಿ ಸಿರಿವರನೆ ಪೊರೆ ಎಂದು ಒಪ್ಪಸಿದ ಕತದಿಂ1 ಗುರು ಕೊಟ್ಟ ಅಂಕಿತವೆ ಮಾಂಗಲ್ಯವಾಯ್ತೆನಗೆ ಗುರುವಿಟ್ಟ ನಾಮವೆ ತಿಲುಕವಾಯ್ತು ಗುರುಕರುಣವೆಂಬ ಕವಚವ ತೊಟ್ಟೆ ಹರುಷದಲಿ ಗುರು ಪ್ರೀತಿ ಎಂಬ ವಸನವನುಟ್ಟು ಮುದದಿ 2 ಗುರುವು ಬೋಧಿಸಿದ ಭಕ್ತಿ ಜ್ಞಾನ ವೈರಾಗ್ಯ ಸರಿ ಮಾಡಿ ಮೂರು ಕಾಲಿನ ಜಡೆಯನು ಪರಿಪರಿಯ ತತ್ವಗಳೆ ಚೌರಿ ರಾಗುಟಿ ಗೊಂಡ್ಯ ಗುರುವಾಜ್ಞೆ ಎಂಬ ಪುಷ್ಪವ ಧರಿಸಿ ಶಿರದಿ3 ಗುರುವಾಕ್ಯ ಶ್ರವಣವೇ ಕರ್ಣಕುಂಡಲವಾಯ್ತು ಗುರುವಿನ ನಿರ್ಮಾಲ್ಯವೇ ನಾಸಿಕಾಭರಣ ಗುರುನಾಮಗಳೆ ರತ್ನ ಪರಿಪರಿಯ ಹಾರಗಳು ಗುರುಭಕ್ತಿ ಎಂಬ ನಡು ಒಡ್ಯಾಣ ಧರಿಸಿ 4 ಗುರುವು ಪೇಳಿದ ಸದ್ಗುಣಗಳೆ ಪಾದಾಭರಣ ಗುರುವಿನ್ವಾತ್ಸಲ್ಯವೆ ಪರಿಮಳ ದ್ರವ್ಯ ಗುರು ಅನುಗ್ರಹವೆಂಬೊ ಮಂಗಳ ದ್ರವ್ಯಗಳು ಗುರು ಮಾತೆ ಎನ್ನ ಪೋಷಿಸಿ ಹರಿಗೆ ಕೊಡಲು 5 ಹೃದಯವೆ ಲಗ್ನ ಮಂಟಪ ದಿವ್ಯ ಶೃಂಗಾರ ಪದುಮಭವ ಸುರರೆ ನೆರದಿಹ ಬಂಧು ಬಳಗ ಒದಗಿ ಬಹ ಸುಜ್ಞಾನ ಸಂಬಾರ ಸಲಕರಣೆ ಮದನ ಪಿತನೆದುರಿಗೆ ನಿಲಿಸಿ ಧಾರೆಯನೆರೆಯೆ 6 ಗುರುವೆ ಜನನಿ ಜನಕ ಗುರುವೆ ಪುರೋಹಿತರು ಗುರುವಚನವೆಂಬ ಅಕ್ಷತೆ ಎರಚುತಿರಲು ಪರಮ ಜೀವಚ್ಛಾದಿ ಕದ ಪರದೆ ತೆಗೆಯುತಿರೆ ಹರಿಗೆ ಗುಣನಾಮ ಜೀರಿಗೆ ಬೆಲ್ಲ ಎರಚೆ 7 ಸುಮನೊ ವೃತ್ತಿಗಳೆಂಬ ಕಮಲದ್ಹಾರವನ್ಹಾಕಿ ಕಮಲನಾಭನ ಪದಕೆರಗಿ ನಿಲಲೂ ಕಮಲಹಸ್ತವ ಶಿರದ ಮೇಲಿಟ್ಟು ಶ್ರೀ ಕೃಷ್ಣ ಕಮಲೆ ನಿನ್ನನು ಪೊರೆವೆನೆಂಬ ಅಭಯ ಕೊಡಲು 8 ಸೂತ್ರ ಬಂಧಿಸಲು ಮುಕ್ತರಾರಾಧ್ಯ ಲಕ್ಷ್ಮೀಕಾಂತನು ಮುಕ್ತರಾರಾಧ್ಯ ಜಗದ್ಭರ್ತೃ ಮುನಿಜನವಂದ್ಯ ವ್ಯಕ್ತನಾಗಲು ಮನದಿ ಗುರು ಕಟಾಕ್ಷದಲಿ 9 ಗುರು ತಿಳಿಸಿದಂಥ ಸ್ವರೂಪದರ್ಪಣ ನೋಡಿ ಪರಮ ಸೌಭಾಗ್ಯ ಆನಂದಪಡುವೆ ಗುರುಗಳಂತರ್ಯಾಮಿ ಗೋಪಾಲಕೃಷ್ಣವಿಠ್ಠಲ ಗುರುಬಿಂಬನೇ ಎನಗೆ ಸುಖವ ಪಾಲಿಸಲಿ 10
--------------
ಅಂಬಾಬಾಯಿ
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಮೋ ನಮೋ ನರಹರಿಪ್ರಿಯಾನರಸಿಂಹಾರ್ಯ ಪಗಲಗಲಿ ಶ್ರೀ ನರಸಿಂಹಾರ್ಯ ಕರುಣದಿಪೊರೆಸದ್ಗುರುವರ್ಯಾ ಶರಣು ಬಂದೆನು ತಂದೆಮಾಡೊ ದಯಾ ತಂದೆ ಮಾಡೊ ದಯಾಪುನರ್ಜನ್ಮ'ತ್ತ ಮಹಾರಾಯಾ 1ನಿಮ್ಮ ಚರಿತ್ರವೆನಗೆ ಸ್ಪೂರ್ತಿನಿಮ್ಮ ಸ್ಮರಣೆ ಜ್ಞಾನದ ಜ್ಯೋತಿನಿಮ್ಮ ಅನುಗ್ರಹವೆ ಕೀರ್ತಿನಿಮ್ಮ ಪಾದವೇ ಎನಗೆ ಗತಿ 2ನಿ'್ಮುಂದಲೇ ಗಾಲವ ಕ್ಷೇತ್ರನಿಮ್ಮ ಮನೆಯು ಸದಾ ಅನ್ನಛತ್ರನಿಮ್ಮ ಆಶ್ರಯವೇ ಜ್ಞಾನ ಸತ್ರನಿಮ್ಮ ಸಂಚಾರವೇ ಮಹಾಯಾತ್ರಾ 3ಅಷ್ಟೋತ್ರ ಶತಕುಂಭ ಸ್ನಾನಾ ನಿತ್ಯ ಅಷ್ಟೋತ್ರರ ಶತ ಕುಂಭಸ್ನಾನಾಕೃಷ್ಣಾ ಭಾಗೀರಥಿ ನನ್ನಿಧಾನಾ ಸೀತಾರಾಮ ಪ್ರತಿಮಾರ್ಚನಾನಿತ್ಯ ರಾತ್ರಿ ಸುಭೋಜನಾ 4ಮುದ್ಗಲಾರ್ಯ ಬಾಬಾರ್ಯನಮೋ ಸದ್ಗುರು ನರಸಿಂಹಾರ್ಯ ನಮೋಸದ್ಭಕ್ತಪ್ರಿಯ ಭೂಪತಿ'ಠ್ಠಲ ಗಲಗಲಿ ನರಹರಿತೊರ'ಯ ನರಹರಿ ಶೂರ್ಪಾಲಿಯ ನರಹರಿ ನಮೋ ನಮೋ 5
--------------
ಭೂಪತಿ ವಿಠಲರು