ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ನೋಡಿ ಧನ್ಯನಾದೆನೊ ಶ್ರೀಕೃಷ್ಣ ದಯದಿಮನ್ನಿಸಯ್ಯ ಮರೆಯ ಹೊಕ್ಕೆನು ಪಅನ್ನಪಾನದಿಂದ ಬೆಳೆದ ತನುವು ಸ್ಥಿರವಿದೆಂದು ನಂಬಿಮುನ್ನ ಮತಿಹೀನನಾಗಿ ನಿನ್ನ ಸ್ಮರಣೆ ಮರೆತೆ ಅ.ಪಮಾಯ ಪಾಶದಲಿ ಸಿಲುಕಿದೆಯನ್ನನಗಲಿ ಅಳಿದ ತಾಯಿತಂದೆಯರಿಗೆ ಮರುಗಿದೇ ಪ್ರಿಯಮಡದಿ ಪರಸ್ತ್ರೀಯರಲಿ ಮೋಹವೆರಸಿಮರುಳನಾದೆಕಾಯಸುಖವನೆಣಿಸಿಸರ್ವೇ ನ್ಯಾಯ ತಪ್ಪಿ ನಡೆದೆ ಕೃಷ್ಣಾ 1ಹಲವು ಜನ್ಮವೆತ್ತಿ ತೊಳಲಿದೇ ತರಳನೆನಿಸಿಹಲವು ಜಾತಿ ಮೊಲೆಯ ಭುಜಿಸಿದೆಹಲವು ದೇಶಗಳನು ಸುತ್ತಿ ಹಲವುಕ್ರೂರಕೃತ್ಯ ಗೈದೆ ತಲೆಯ ಹಿಂದೆಇರುವ ಮೃತ್ಯು ನೆಲೆಯನರಿಯದಿರ್ದೆ ಕೃಷ್ಣಾ 2ಆಶಾಪಾಶಗಳಲಿ ಸರ್ವ ದೋಷ ಮೋಸವೆಣಿಸದಾದೆಲೇಸ ಕಾಣೆ ಮುಂದೆ ಯಮನ ಪಾಶಕರ್ಹನಾದೆ ಕೃಷ್ಣಾ3ಅರಿಗಳಾರು ಮಂದಿ ದೇಹದಿ ನೆಲಸಿರ್ದು ಎನ್ನಮರುಳುಗೊಳಿಸೆ ಇಂದ್ರಿಯ ಸಹಾಯದಿನರವು ಮಾಂಸ ಅಸ್ಥಿಯಿಂದ ವಿರಚಿಸಿದ ದೇಹವಿದನುಪರಿಪರಿಯ ಶೃಂಗರಿಸುತ ಸ್ಮರನ ತೆರದಿ ಮೆರೆದೆ ಕೃಷ್ಣಾ 4ಒಂದು ದಿನವು ಸುಖವ ಕಾಣೆನೂ ಈ ಜೀವನಸಂಬಂಧಿಗಳ್ಯಾರೆಂಬುದನರಿಯೆನೂಬಂಧು ನೀನೇ ಸರ್ವಪ್ರದನು ಮುಂದೆ ಜನುಮವೆತ್ತದಂತೆಬಂದು ಎನ್ನ ಸಲಹೋ ಗೋವಿಂದದಾಸನೊಡೆಯ ಕೃಷ್ಣಾ 5
--------------
ಗೋವಿಂದದಾಸ
ಹರಿಕಥಾಮೃತ ಸವಿಯ ಹರಿದಾಸರಲ್ಲದೆದುರುಳಮಾನವರದರಪರಿಬಲ್ಲಿರೇನಯ್ಯಪ.ಸ್ತನ ಪಾನದ ರುಚಿಯ ಚಿಣ್ಣರು ಬಲ್ಲರಲ್ಲದೆಮೊಣ್ಣ ಬೊಂಬೆಗಳದರ ಬಗೆ ಬಲ್ಲುವೆ ||ಅನ್ನಪಾನದ ರುಚಿಯ ಕೊನೆ ನಾಲಿಗೆಯಲ್ಲದೆಅಣಿಮಾಡಿಕೊಡುವ ಆಕರಬಲ್ಲುದೇನಯ್ಯ1ನವನೀರದಾರ್ಭಟಕೆ ನವಿಲುಗಳು ನಲಿವಂತೆಕಾವು ಕಾವೆಂಬ ಕಾಕವು ಬಲ್ಲುದೆ ? ||ದಿವಸಕರನುದಯಿಸಲು ಅರಳುವಬ್ಜಗಳಂತೆದಿವಸಾಂಧ ಪಕ್ಷಿಗಳು ಬಗೆಬಲ್ಲುವೇನಯ್ಯ 2ಮೊಲ್ಲೆ - ಮಲ್ಲಿಗೆ ಮುಡಿಯಬಲ್ಲ ಮಾನವರಂತೆಭಲ್ಲೂಕಗಳು ಅದರ ಬಗೆ ಬಲ್ಲುವೆ ?ಫುಲ್ಲಾಕ್ಷ ಶ್ರೀ ಪುರಂದರವಿಠಲರಾಯನನುಬಲ್ಲ ಮಾನವರಲ್ಲದೆಲ್ಲರೂ ಬಲ್ಲರೆ ? 3
--------------
ಪುರಂದರದಾಸರು