ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾಮೃತವ ಸಿರದಿ ಸುರಿಯೊ ವರದ ಧನ್ವಂತರಿಯೆ ಚರಣಯುಗಳ ಕಮಲವನ್ನು ಕರುಣಿಸೆನಗೆ ದೊರೆಯೆ ಪ. ಶ್ರವಣ ನಯನ ಚಿತ್ತ ಜಿಹ್ವೆಗನುಕೂಲವಾಗಿರುವ ಲೀಲಾ ಪ್ರವರ ಕಾಂತಿ ಸ್ಮರಣ ನಾಮಗಳನು ಪಾಲಿಸಿ ಭವಜನೀತ ಭ್ರಮಣ ನಿಲಿಸಿ ಕುವರನಂತೆ ರಕ್ಷಿಸೆನ್ನ ಕವಿಭಿರೀಡ್ಯ ಕಂಜಜಾತಶಿವರ ಸೌಖ್ಯಗೊಳಿಸದವನೆ 1 ಕಲಿಕೃತ ಕಲ್ಮಶಗಳಿಂದ ಬಳಲುವಂಥ ಬಾಧೆಯನ್ನು ನಿಲಿಸಿಕೊಳ್ಳಲು ಅನ್ಯಮಾರ್ಗಂಗಳನು ಕಾಣೆನು ನಳಿನನಾಭ ನಿನ್ನ ಪಾದಗಳನೆ ನಂಬಿಕೊಂಡಿರುವೆನು ಬಲಿಯ ಕಾಯ್ವ ಭೂಮಿಜೇಶ ಘಳಿರನೆ ಬಂದೊದಗಿ ಬೇಗ 2 ನಿಖಿಳ ಭೋಗಗಳನನುಭವಿಸುತ ಶ್ರೀಗುರು ಮಧ್ವಾಂತರಾತ್ಮ ನಾಗಗಿರಿನಾಥ ರಾಗ ರೋಗ ದೋಷಗಳನು ನೀಗಿ ನಿನ್ನ ನಂಬಿ ಸ್ತುತಿಪ ಭಾಗವತರ ಭಕ್ತನೆನಿಪ ಭಾಗ್ಯವಿರಿಸೋ ಭೀಮವರದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಧನ್ಯನಾದೆನಯ್ಯ ನಾನು ಧನ್ಯನಾದೆನುಅನ್ಯಮಾರ್ಗವನುಳಿದು ನಿನ್ನ ಭಕ್ತ ಭಕ್ತನಾಗಿ ಪನಿನ್ನ ಮೂರುತಿಯ ನೋಡಿ ನಿನ್ನ ಗುಣವ ಕೊಂಡಾಡಿನಿನ್ನ ನಾಮಗಳ ಪಾಡಿ ನಿನ್ನ ಮುಂದೆ ಕುಣಿದಾಡಿ 1ಆವ ಜನ್ಮಾರ್ಜಿತ ಪುಣ್ಯ ತಾವೊದಗಿತೊ ನಾ ಕಾಣೆನೀವೊಲಿದರೆ ದುರ್ಲಭ ವಾವುದೀ ಮೂರು ಲೋಕದಿ 2ತಿರುಪತಿ ಕ್ಷೇತ್ರಾಧಿವಾಸ ಪರಮಪುರುಷ ವೆಂಕಟೇಶಗುರು ವಾಸುದೇವಾರ್ಯ ವೇಷ ಮರೆಯೊಕ್ಕೆ ನಾ ನಿನ್ನ ದಾಸ 3ಓಂ ಭೀಷ್ಮ ಮುಕ್ತಿಪ್ರದಾಯಕಾಯ ನಮಃ
--------------
ತಿಮ್ಮಪ್ಪದಾಸರು
ಲಜ್ಜೆ ಲಜ್ಜೆ ನಿನ್ನ ನಂಬಿ ಕೆಟ್ಟೆನಾನು ಮಾಡೊದೇನು ಪ ಗೆಜ್ಜೆ ಕಟ್ಟಿದ್ದೊರೆ ಕೃಷ್ಣ ಭಜನೆಯಲ್ಲಿ ಮಾನದಲ್ಲಿ ಅ.ಪ. ಆರು ವಲಿದು ಮಾಡೊದೇನು ಆರುಮುನಿದು ಮಾಡೊದೇನು ಚಾರು ಚಾರು ಮೆಚ್ಚಲೇನು ಭಾರಿದೇವ ವಿಶ್ವಜನಕೆ ಹರಿಯದಾಸನೆಂದು ಇನ್ನು ಈರ ಮತವ ಸಾರಿಸಾರಿನಲಿದು ನಲಿದು ಸುಖಿಪುದಕ್ಕೆ 1 ದುಡ್ಡು ಕಾಸುಬೇಡ ನಮಗೆ ದೊಡ್ಡತನವು ಬೇಡ ಹಾಗೆ ಹೆಡ್ಡತನನ ಬಿಟ್ಟು ಪಿರಿಯಕೃಷ್ಣನನ್ನು ಭಜಿಸಲಿಕ್ಕೆ ಅಡ್ಡಿಏನು ಕುರುಡು ಮನವೆ ನೆನೆದುನೆನೆದು ನೋಡುನೀನೆ ದೊಡ್ಡತನವೆ ಸತ್ಯವೀದು ದಡ್ಡತನವೆ ದುರಭಿಮಾನ 2 ಹರಿಯದಾಸದೀಕ್ಷೆ ಪಡೆಯೆ ಸುಲಭವಲ್ಲ ಸುಲಭವಲ್ಲ ದುರಿತ ರಾಶಿಪೋಗಿ ಶುದ್ಧ ಚಿನ್ನದಂತೆ ಆಗದೇನೆ ಹಿರಿದು ಕಾಣೊ ಇಂಥಾ ಜನ್ಮ ಬರಿಯ ಮಾತಿಗೊಲಿಯದೇವ ಅರಿವಿನಂತೆ ನಡೆಯದಿರಲು ತೊರೆದು ಎಲ್ಲ ದುರಭಿಮಾನ 3 ಗೆಜ್ಜೆಕಟ್ಟಿ ಕುಣಿದು ಕುಣಿಯೆ ಲಜ್ಜೆನಾಶವಾಹುದೈಯ್ಯ ಲಜ್ಜೆನಾಶವಾಗಿ ಭಕ್ತಿಯುಕ್ತಿ ಉಕ್ಕಿಹರಿಯುತಿರಲು ಅಬ್ಜಪೀಠ ಪಿತನುತಾನೆ ಅಪ್ಪಿಕೊಂಡು ನಲಿದುನಲಿವ ಅಬ್ಜನಾಭ ನಲಿದು ವಲಿಯೆ ಹೆಚ್ಚುಉಂಟೆ ಅದರಕ್ಕಿಂತ 4 ಮೆರೆಯುತಿರಲು ದುಷ್ಟಕಲಿಯು ಅನ್ಯಮಾರ್ಗ ಸಾಧ್ಯವಿಲ್ಲ ಹರಿಯ ಭಜನೆ ಒಂದೇ ದಾರಿ ಹರಿಯ ವಲಿಸೆ ಸಿದ್ಧವೀದು ಜರಿದು ವಿಷಯ ಬೆರಸಿ ಭಕ್ತಿ ಸಿರಿಯ ರಮಣ “ಕೃಷ್ಣವಿಠಲ” ಚರಣ ಯುಗವ ಭಜಿಸಿ ನೀನು ಮಾನ್ಯನಾಗೋ ಧನ್ಯನಾಗೊ 5
--------------
ಕೃಷ್ಣವಿಠಲದಾಸರು